ಸಾಂದರ್ಭಿಕ ಚಿತ್ರ  
ರಾಜ್ಯ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಕಾಲೇಜು ಉಪನ್ಯಾಸಕ ಸೇರಿ ಮೂವರು ಬೆಂಗಳೂರಿನಲ್ಲಿ ಬಂಧನ

ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಇಡೀ ರಾಜ್ಯವೇ ತಲೆತಗ್ಗಿಸುವಂತಹ ಮತ್ತೊಂದು ಘಟನೆ ನಡೆದಿದೆ. ವಿದ್ಯೆ ಕಲಿಸುವ ಶಿಕ್ಷಕರೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಉಪನ್ಯಾಸಕರಿಂದಲೇ ನೀಚಕೃತ್ಯ

ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದ, ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದ ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಮಯದಲ್ಲಿ ಆಕೆ ಪ್ರತಿರೋಧ ವ್ಯಕ್ತಪಡಿಸಿದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ ಎಂದು ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ನಡೆಸಿದ್ದ.

ಉಪನ್ಯಾಸಕರ ಸ್ನೇಹಿತನಿಂದಲೂ ಬೆದರಿಕೆ, ಅತ್ಯಾಚಾರ

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗುತ್ತಿದೆ.

ಉಪನ್ಯಾಸಕರಿಂದ ಬೆದರಿಕೆ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ಪೊಷಕರು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕೌನ್ಸೆಲಿಂಗ್ ನೀಡಿ ಧೈರ್ಯ ತುಂಬಿದ್ದಾರೆ, ಬಳಿಕ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

SCROLL FOR NEXT