ವಿಶೇಷ ಡಿಜಿಲಾಕರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ನರ್ಸ್ ಗಳ ನೋಂದಣಿಗಾಗಿ ವಿಶೇಷ ಡಿಜಿಲಾಕರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಈ ತಂತ್ರಜ್ಞಾನ ಆಧಾರ್ ಆಧಾರಿತ ಡಿಜಿಲಾಕರ್, ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಆಧಾರಿತ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟನೆ ಮಾಡಿದರು.

ವಿಶೇಷ ಡಿಜಿಲಾಕರ್ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಈ ತಂತ್ರಜ್ಞಾನ ಆಧಾರ್ ಆಧಾರಿತ ಡಿಜಿಲಾಕರ್, ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ವ್ಯವಸ್ಥೆಯನ್ನು ಯುಐಡಿಎಐ, ಸಿ-ಇಜಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(ಆರ್‌ಜಿಯುಎಚ್‌ಎಸ್) ಮತ್ತು ಕರ್ನಾಟಕ ರಾಜ್ಯ ನರ್ಸಿಂಗ್ ಪರೀಕ್ಷಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ.

ಈ ತಂತ್ರಜ್ಞಾನದ ನೆರವಿನಿಂದ ಆಧಾರ್ ಇ-ಕೆವೈಸಿ (E-Kyc)ಯಿಂದ ಶುಶ್ರೂಷಕರ ವೈಯಕ್ತಿಕ ಡಾಟಾ, ವಿಳಾಸ, ಫೋಟೋ, ಹಾಗೂ ಇತರೆ ಮಾಹಿತಿಗಳನ್ನು ಆಧಾರ್ ಸರ್ವರ್ ನಿಂದ ನೇರವಾಗಿ ಕರ್ನಾಟಕ ಶುಶ್ರೂಷ ಪರಿಷತ್ ಪಡೆದುಕೊಳ್ಳಬಹುದಾಗಿದೆ. ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೋಂದಣಿಗಾಗಿ ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್ತಿನ ಬೆಂಗಳೂರಿನ ಕೇಂದ್ರ ಕಚೇರಿಗೆ ಬರಬೇಕಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷಗಳ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು, Video!

ಧರ್ಮಸ್ಥಳದ ವಿರುದ್ಧ ಬಿಜೆಪಿಯಿಂದಲೇ ಷಡ್ಯಂತ್ರ: ಡಿಕೆ ಶಿವಕುಮಾರ್

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್!

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

SCROLL FOR NEXT