ಶುಭಾ ಮತ್ತು ಕೊಲೆಯಾದ ಗಿರೀಶ್ 
ರಾಜ್ಯ

ಬೆಂಗಳೂರು: ಭಾವಿ ಪತ್ನಿಯಿಂದ ಟೆಕ್ಕಿ ಹತ್ಯೆ ಪ್ರಕರಣ; ಕ್ಷಮಾದಾನ ಕೋರಲು ಶುಭಾಗೆ ಅವಕಾಶ; ಅಪರೂಪದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್

ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್‌ ಅವರನ್ನು ಕೊಲೆ ಮಾಡಿರುವುದು ಎಲ್ಲ ಸಾಕ್ಷ್ಯಧಾರಗಳಿಂದ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಹೈಕೋರ್ಟ್‌ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಲಾಗುತ್ತಿದೆ.

ನವದೆಹಲಿ: 2003ರಲ್ಲಿ ಭಾವಿ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್‌ ಸೋಮವಾರ ಅಂತಿಮ ತೀರ್ಪು ನೀಡಿದೆ.

ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿ ಹಿಡಿದ ನ್ಯಾ. ಎಂ.ಎಂ.ಸುಂದರೇಶ್‌ ಮತ್ತು ಅರವಿಂದ್ ಕುಮಾರ್ ಅವರ ದ್ವಿಸದಸ್ಯ ಪೀಠ ಅಪರಾಧಿಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ವಜಾಗೊಳಿಸಿದೆ.

ಪ್ರಕರಣ ಸಂಬಂಧ ತಮಗೆ ಜೀವಾವಧಿ ಶಿಕ್ಷೆ ವಿಧಿಸಿ 2010ರಲ್ಲಿ ಅಧೀನ ನ್ಯಾಯಾಲಯ ಮತ್ತು 2011ರಲ್ಲಿ ಹೈಕೋರ್ಟ್‌ ಹೊರಡಿಸಿದ್ದ ತೀರ್ಪು ರದ್ದುಪಡಿಸಬೇಕು ಮತ್ತು ತಮ್ಮನ್ನು ಖುಲಾಸೆಗೊಳಿಸಬೇಕು ಎಂದು ಕೋರಿ ಆರೋಪಿಗಳಾದ ಡಿ.ಅರುಣ್‌ ವರ್ಮಾ (ಎ-1). ಎ.ವೆಂಕಟೇಶ್‌ (ಎ-2), ದಿನೇಶ್‌ (ಎ-3) ಮತ್ತು ಶುಭಾ (ಎ-2) ಸುಪ್ರೀಂ ಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದರು.

ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್‌ ಅವರನ್ನು ಕೊಲೆ ಮಾಡಿರುವುದು ಎಲ್ಲ ಸಾಕ್ಷ್ಯಧಾರಗಳಿಂದ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಹೈಕೋರ್ಟ್‌ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಲಾಗುತ್ತಿದೆ ಎಂದು ಸುಪ್ರಿಂ ಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ.

ಶುಭಾ ತನ್ನ ಕಾಲೇಜು ಗೆಳೆಯ ಮತ್ತು ಇತರ ಇಬ್ಬರೊಂದಿಗೆ ಸೇರಿ ಕೊಲೆಗೆ ಸಂಚು ರೂಪಿಸಿದ್ದಳು. ಅಪರಾಧಕ್ಕೆ ಕಾರಣವಾದ ಭಾವನಾತ್ಮಕ ಮತ್ತು ಸಾಮಾಜಿಕ ಮೌಲ್ಯದ ಕುಸಿತದ ಬಗ್ಗೆ ಪೀಠವು ತೀವ್ರ ಕಳವಳ ವ್ಯಕ್ತಪಡಿಸಿತು.

ಅಲ್ಲದೆ, ಆಲೋಚನಾ ಶಕ್ತಿ ಹೆಚ್ಚಿರದ ಯೌವನದಲ್ಲಿ ದುಡುಕಿ ಕೊಲೆ ಮಾಡಿರುವುದರಿಂದ ರಾಜ್ಯಪಾಲರಲ್ಲಿ ಕ್ಷಮದಾನ ಕೋರಲು ಎಲ್ಲ ಆರೋಪಿಗಳಿಗೆ ಅವಕಾಶ ಕಲ್ಪಿಸಲು ಸುಪ್ರೀಂ ಕೋರ್ಟ್‌ ಇದೇ ವೇಳೆ ಆದೇಶಿಸಿದೆ.

ಗಿರೀಶ್‌ ಕೊಲೆ ಘಟನೆ ನಡೆದಿರುವುದು 2003ರಲ್ಲಿ. ಆಗ ಎಲ್ಲ ನಾಲ್ವರು ಆರೋಪಿಗಳು ಯೌವನದಲ್ಲಿದ್ದರು. ಶುಭಾಗೆ ಮೃತ ಗಿರೀಶ್‌ ಅವರನ್ನು ವಿವಾಹವಾಗಲು ಇಷ್ಟವಿರಲಿಲ್ಲ. ಈ ಸಮಸ್ಯೆಯನ್ನು ತಪ್ಪು ವಿಧಾನದಲ್ಲಿ ನಿಭಾಯಿಸಲಾಗಿದೆ. ತಿಳಿವಳಿಕೆಯ ಕೊರತೆಯಿಂದ ಗಿರೀಶ್‌ನನ್ನು ಕೊಲೆ ಮಾಡಲಾಗಿದೆ. ಘಟನೆ ನಡೆದು ಎರಡು ದಶಕಗಳೇ ಕಳೆದಿವೆ. ಮೂರನೇ ಆರೋಪಿ ದಿನೇಶ್‌ಗೆ 28 ವರ್ಷ. ಆತ ಇತ್ತೀಚೆಗೆ ಮದುವೆಯಾಗಿದ್ದು, ಮಗು ಜನಿಸಿದೆ. ಜೈಲಿನಲ್ಲಿದ್ದ ಸಮಯದಲ್ಲಿ ಆರೋಪಿಗಳು ಸನ್ನಡತೆ ತೋರಿದ್ದಾರೆ. ಅವರು ಹುಟ್ಟಿನಿಂದಲೇ ಕ್ರಿಮಿನಲ್‌ಗಳಲ್ಲ. ಆದರೆ, ಜೀವನದಲ್ಲಿ ಒಂದು ಅಪಾಯಕಾರಿ ಕೆಲಸ ಮಾಡಲು ತೆಗೆದುಕೊಂಡು ಕೆಟ್ಟ ತೀರ್ಮಾನ ಒಂದು ಕೊಲೆ ಅಪರಾಧವನ್ನು ಮಾಡಲು ದಾರಿಯಾಯಿತು ಎಂದು ಆದೇಶದಲ್ಲಿ ನ್ಯಾಯಪೀಠ ಹೇಳಿದೆ.

ಜೊತೆಗೆ, ಕೊಲೆ ಮಾಡಿದಾಗ ಯೌವನದಲ್ಲಿದ್ದ ಆರೋಪಿಗಳು ಈಗ ಮಧ್ಯ ವಯಸ್ಕರಾಗಿದ್ದಾರೆ. ಆದ್ದರಿಂದ ಅವರಿಗೆ ಹೊಸ ಜೀವನ ಆರಂಭಿಸುವ ಒಂದು ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ. ಅದರಂತೆ ಕ್ಷಮಾದಾನ ಕೋರಿ ಶುಭಾ ಹಾಗೂ ಇತರೆ ಆರೋಪಿಗಳು ಮುಂದಿನ 8 ವಾರಗಳಲ್ಲಿ ರಾಜ್ಯಪಾಲರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಬಹುದು. ಆ ಮನವಿಯನ್ನು ರಾಜ್ಯಪಾಲರು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ರಾಜ್ಯಪಾಲರು ಕ್ಷಮಾದಾನದ ಮನವಿಗಳನ್ನು ನಿರ್ಧರಿಸುವವರೆಗೂ ಜಾಮೀನು ಮೇಲಿರುವ ಆರೋಪಿಗಳನ್ನು ಬಂಧಿಸಬಾರದು ಎಂದು ಪೊಲೀಸರಿಗೆ ನ್ಯಾಯಪೀಠ ನಿರ್ದೇಶಿಸಿದೆ.

2003ರ ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಅಡ್ವೊಕೇಟ್ ಶುಭಾ ವಿವಾಹದ ನಿಶ್ಚಿತಾರ್ಥ ತನ್ನ ನೆರೆಹೊರೆಯ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ ಅವರೊಂದಿಗೆ ನಡೆದಿತ್ತು. ಐದು ತಿಂಗಳ ನಂತರ ವಿವಾಹ ನಿಗದಿಯಾಗಿತ್ತು. ಬಿ.ಎಂ.ಎಸ್. ಲಾ ಕಾಲೇಜಿನಲ್ಲಿ ಓದುತ್ತಿದ್ದಾಗ ತನ್ನ ಕಿರಿಯ ಸಹಪಾಠಿಯಾಗಿದ್ದ ಅರುಣ್ ವರ್ಮನನ್ನು ಪ್ರೀತಿಸಿದ್ದ ಶುಭಾ, ಗಿರೀಶ್ ಅವರನ್ನು ಕೊಲೆ ಮಾಡುವ ಸಂಚು ರೂಪಿಸಿದಳು.

ಅದರಂತೆ 2003ರ ಡಿ.3ರಂದು ರಾತ್ರಿ ಊಟದ ನೆಪದಲ್ಲಿ ಗಿರೀಶ್ ಅವರನ್ನು ಶುಭಾ, ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣದಿಂದ ಏರುವ ಮತ್ತು ಇಳಿಯುವ ವಿಮಾನಗಳನ್ನು ನೋಡಲು ಜನ ಜಮಾಯಿಸುತ್ತಿದ್ದ ಇಂದಿರಾನಗರ-ಕೋರಮಂಗಲದ ಬಳಿಯ ರಿಂಗ್ ರೋಡ್‌ ಜಂಬೋ ಪಾಯಿಂಟ್ ಬಳಿಗೆ ಕರೆ ತಂದಿದ್ದಳು. ಅರುಣ್‌ ವರ್ಮಾ ಗೊತ್ತುಮಾಡಿದ್ದ ರೌಡಿ ವೆಂಕಟೇಶ್‌, ಹಿಂದಿನಿಂದ ಬಂದು ಗಿರೀಶ್‌ ತಲೆಗೆ ಬಲವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಗಿರೀಶ್‌ ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

SCROLL FOR NEXT