ರೈತರ ಜೊತೆಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ದೇವನಹಳ್ಳಿ ರೈತರ ಹೋರಾಟಕ್ಕೆ ದೊಡ್ಡ ಗೆಲುವು: ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ!

ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಮೂರ್ನಾಲ್ಕು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.

ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನರಾಯಪಟ್ಟಣ ಸುತ್ತಮುತ್ತಲಿನ 13 ಗ್ರಾಮಗಳ ಭೂ ಸ್ವಾಧೀನಕ್ಕೆ ಕೆಐಎಡಿಬಿಗೆ ಭೂಮಿ ನೀಡಲು ರೈತರು, ಸಂಘಟನೆಗಳು ಒಪ್ಪುತ್ತಿಲ್ಲ. ರಾಜ್ಯ ಸರ್ಕಾರ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಬಲವಂತವಾಗಿ ಖರೀದಿಸುವುದಿಲ್ಲ .ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ ಆಶಯವಾಗಿದೆ. ಸರ್ಕಾರದ ನಿರ್ಧಾರ ದೇವನಹಳ್ಳಿ ಪ್ರದೇಶಕ್ಕೆ ಮಾತ್ರ ಸಿಮೀತವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಚಿವರಾದ ಎಂಬಿ ಪಾಟೀಲ್, ಕೆ.ಎಚ್; ಮುನಿಯಪ್ಪ, ರೈತ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಟ ಪ್ರಕಾಶ್ ರಾಜ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಬಳಿಕ ಮಾತನಾಡಿದ ನಟ ಪ್ರಕಾಶ್ ರಾಜ್, ಇದು ರೈತರ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ರೈತರ ಜೊತೆಗೆ ಚರ್ಚಿಸಿದ ಬಳಿಕ ಸಿಎಂ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ಪ್ರಕಟಿಸಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT