ಕಾಡಾನೆಗಳ ಸಾಂದರ್ಭಿಕ ಚಿತ್ರ 
ರಾಜ್ಯ

ಮಾನವ-ಆನೆ ಸಂಘರ್ಷ ತಗ್ಗಿಸಲು ಒಪ್ಪಂದ: ಅರಣ್ಯ ಇಲಾಖೆ-IISc ಸಹಿ!

ಮೈಸೂರು ಆನೆ ಮೀಸಲು ಪ್ರದೇಶದಲ್ಲಿ ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ 5 ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷವಾಗಿ ಮೈಸೂರು ಆನೆ ಸಂರಕ್ಷಿತ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾನವ-ಆನೆಗಳ ಸಂಘರ್ಷವನ್ನು ತಗ್ಗಿಸಲು ಮತ್ತು ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ ಅರಣ್ಯ ಇಲಾಖೆ ಮತ್ತು IISc ಜುಲೈ 15 ರಂದು ಒಪ್ಪಂದಕ್ಕೆ ಸಹಿ ಹಾಕಿವೆ. ಇದು ದೇಶದ ಅತಿದೊಡ್ಡ ಆನೆ ಮೀಸಲು ಪ್ರದೇಶವಾಗಿದೆ.

ಮೈಸೂರು ಆನೆ ಮೀಸಲು ಪ್ರದೇಶದಲ್ಲಿ ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ 5 ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.ಸ್ಯಾಟಲೈಟ್ ಟೆಲಿಮೆಟ್ರಿ, ಕ್ಯಾಮೆರಾ ಟ್ರಾಪ್‌ಗಳು ಮತ್ತು ಜಿಐಎಸ್ ಮಾದರಿಗಳನ್ನು ಬಳಸಿಕೊಂಡು ಆನೆ ಕಾರಿಡಾರ್‌ ಗುರುತಿಸುವುದು ಮತ್ತು ಆನೆಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ಗುರುತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ, ಆನೆ- ಮಾನವ ಸಂಘರ್ಷಗಳನ್ನು ತಗ್ಗಿಸಲು ಬ್ಯಾರಿಕೇಡ್‌ಗಳು, ಬೇಲಿ ಹಾಕುವುದು ಸೇರಿದಂತೆ ಹಲವು ವಿಧಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಅರಣ್ಯದ ಅಂಚಿನಲ್ಲಿ ಹೆಚ್ಚಿದ ನಗರೀಕರಣದಿಂದಾಗಿ ಇದು ಹೆಚ್ಚಿದ್ದು, ಸುಮಾರು 150 ಆನೆಗಳು ಕೊಡಗು ಮತ್ತು ಹಾಸನದಲ್ಲಿ ಕಾಡಿನ ಹೊರಗಿನ ಪ್ರದೇಶಗಳಲ್ಲಿವೆ. ಹೀಗಾಗಿ ಐದು ವರ್ಷಗಳ ಅಧ್ಯಯನದ ಭಾಗವಾಗಿ, IISc ಮತ್ತು ಆನೆ ತಜ್ಞರು ಆಧುನಿಕ ತಂತ್ರಜ್ಞಾನ ಸೇರದಂತೆ ವಿವಿಧ ವಿಧಾನಗಳನ್ನು ಬಳಸಿಕೊಂಡು ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ. ಇದು ಸಂಘರ್ಷ ತಪ್ಪಿಸಲು ನೆರವಾಗುತ್ತದೆ ಎಂದರು.

ಅರಣ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕರ್ನಾಟಕವು 6,395 ಕಾಡು ಆನೆಗಳನ್ನು ಹೊಂದಿದೆ ಮತ್ತು ಏಷ್ಯಾದ ಅತ್ಯಂತ ನಿರ್ಣಾಯಕ ಆನೆ ಶ್ರೇಣಿಗಳಲ್ಲಿ ಒಂದಾಗಿದೆ. ಮೈಸೂರು ಆನೆ ಸಂರಕ್ಷಿತ ಪ್ರದೇಶ ಮತ್ತು ಸುತ್ತಮುತ್ತಲಿನ ಕಾಫಿ ಬೆಳೆಯುವ ಜಿಲ್ಲೆಗಳು ಹೆಚ್ಚೆಚ್ಚು ಸಂಘರ್ಷಕ್ಕೆ ಸಾಕ್ಷಿಯಾಗುತ್ತಿದ್ದು, ಇದರಿಂದಾಗಿ ಮಾನವ ಜೀವ, ಬೆಳೆ ಹಾನಿ ಮತ್ತು ಆನೆಗಳ ವಿರುದ್ಧ ಪ್ರತೀಕಾರದ ಕ್ರಮಗಳು ಸಂಭವಿಸುತ್ತಿವೆ.

ಯೋಜನೆಯ ಪ್ರಮುಖ ಉದ್ದೇಶಗಳು:

  • ಈ ಯೋಜನೆಯ ಪ್ರಮುಖ ಉದ್ದೇಶವು ಉಪಗ್ರಹ ಟೆಲಿಮೆಟ್ರಿ, ಕ್ಯಾಮೆರಾ ಟ್ರ್ಯಾಪ್‌ಗಳು ಮತ್ತು GIS ಮಾದರಿಗಳನ್ನು ಬಳಸಿಕೊಂಡು ಆನೆಗಳ ಕಾರಿಡಾರ್‌ಗಳನ್ನು ಗುರುತಿಸುವುದು ಮತ್ತು ಆನೆಗಳ ಸಂಚಾರಕ್ಕೆ ಅಡ್ಡಿಯಾಗುವ ಅಡೆತಡೆಗಳನ್ನು ಪತ್ತೆಹಚ್ಚುವುದು.

  • ಆನೆ ಲದ್ದಿಯಲ್ಲಿರುವ ಹಾರ್ಮೋನ್‌ಗಳ ಪರೀಕ್ಷೆ ನಡೆಸುವ ಮೂಲಕ ಆನೆಗಳ ದೇಹದ ಸ್ಥಿತಿ ಮತ್ತು ಒತ್ತಡ ಸೂಚಕಗಳನ್ನು ಅಂದಾಜು ಮಾಡಲಾಗುತ್ತದೆ.

  • ಆನೆಗಳ ಅಧ್ಯಯನ-ವಿಶ್ಲೇಷಣೆ ಮಾಡಿ ರೈತರಿಗೆ ಅರಿವು ಮೂಡಿಸುವುದೂ ಈ ಯೋಜನೆಯ ಭಾಗವಾಗಿದೆ.

  • ಆನೆಗಳು ನಾಡಿನತ್ತ ಬಂದಾಗ ಮುನ್ನೆಚ್ಚರಿಕೆ ಗಂಟೆ ಮೊಳಗಿಸುವ ವ್ಯವಸ್ಥೆ ರೂಪಿಸುವ ಹಾಗೂ ಸ್ವಯಂ ಚಾಲಿತ ಧ್ವನಿಯಂತ್ರಗಳ ಮೂಲಕ ಆನೆಗಳನ್ನು ಹಿಮ್ಮೆಟ್ಟಿಸುವ ಬಗ್ಗೆಯೂ ಅಧ್ಯಯನ ನಡೆಸಲಾಗುವುದು.

ಐಐಎಸ್‌ಸಿಯ ಖ್ಯಾತ ಆನೆ ತಜ್ಞ ರಾಮನ್ ಸುಕುಮಾರ್ ಮಾತನಾಡಿ, ಸಂಘರ್ಷ ಹೆಚ್ಚುತ್ತಿದ್ದು, ಕ್ರಮ ಕೈಗೊಳ್ಳುವ ಮುನ್ನ ವೈಜ್ಞಾನಿಕ ತಿಳುವಳಿಕೆ ಅಗತ್ಯವಾಗಿದೆ. ಸಂಘರ್ಷವನ್ನು ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ, ಆದರೆ ಕಡಿಮೆ ಮಾಡಬಹುದು. ಹೀಗಾಗಿ ಎಲ್ಲ ಆನೆ ಶ್ರೇಣಿಗಳಲ್ಲಿ ನಡೆಯುವ ಈ ಅಧ್ಯಯನ ಪ್ರಯೋಜನಕಾರಿಯಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT