ಸಾಂದರ್ಭಿಕ ಚಿತ್ರ  
ರಾಜ್ಯ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ: ಸಾರಿಗೆ ನಿಗಮಗಳ ನೌಕರರಿಂದ ಆಗಸ್ಟ್ 5ಕ್ಕೆ ಮುಷ್ಕರ

ರಾಜ್ಯದ ಕೆಎಸ್​ಆರ್​ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ರಾಜ್ಯದ ಕೆಎಸ್​ಆರ್​ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯಗೆ ನೋಟಿಸ್

ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್​​ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಇ-ಮೇಲ್​ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.

4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಯುದ್ಧ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ

9 TMC ನೀರಿಗೆ ತಮಿಳುನಾಡು ಪಟ್ಟು: ಮುಂಗಾರು ಕೊರತೆ ಉಲ್ಲೇಖಿಸಿದ ಕರ್ನಾಟಕ ಆಕ್ಷೇಪ; ನಿರ್ಧಾರ ಮುಂದೂಡಿಕೆ..!

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬೀನ್ ಸೂಚನೆ?