ಸಿದ್ದರಾಮಯ್ಯ-ನಾರಾಯಣ ಭರಮನಿ 
ರಾಜ್ಯ

ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಬರಮನಿಗೆ ಜಾಕ್‌ಪಾಟ್; ಬೆಳಗಾವಿ DCP ಹುದ್ದೆಗೆ ಬಡ್ತಿ!

ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತ(ಡಿಸಿಪಿ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್‌ಪಾಟ್ ಹೊಡೆದಿದೆ.

ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತ(ಡಿಸಿಪಿ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

ಕೆಲವು ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿದ್ದರು. ಕಾರ್ಯಕ್ರಮದ ಮಧ್ಯೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಕ್ಕೆ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಅವರು ಯಾರು ಎಸ್‌ಪಿ ಎಂದು ಕೇಳಿ, ಕೈಎತ್ತಿ ಹೊಡೆಯಲು ಹೋಗಿದ್ದರು.

ಈ ಘಟನೆ ಬಳಿಕ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಮಾತನಾಡಿ ಮನವೊಲಿಸಿದ್ದರು. ನಂತರ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!