ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಜನದಟ್ಟಣೆ ಮತ್ತು ಕಾಲ್ತುಳಿತ ನಂತರದ ದೃಶ್ಯ  
ರಾಜ್ಯ

Bengaluru Stampede: ತನಿಖಾ ಸಮಿತಿ ವರದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

"ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಸಂಪುಟ ಸ್ವೀಕರಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ನಾವು ಇದನ್ನು ಅಧ್ಯಯನ ಮಾಡಿ ಚರ್ಚಿಸುತ್ತೇವೆ.

ಬೆಂಗಳೂರು: ಜೂನ್ 4 ರಂದು 11 RCB ಅಭಿಮಾನಿಗಳ ಸಾವಿಗೆ ಕಾರಣವಾದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಏಕವ್ಯಕ್ತಿ ತನಿಖಾ ಆಯೋಗದ ತನಿಖಾ ವರದಿಯನ್ನು ಗುರುವಾರ ರಾಜ್ಯ ಸಚಿವ ಸಂಪುಟದ ಮುಂದೆ ಇಡಲಾಗಿದ್ದು, ಮುಂದಿನ ಸಭೆಯಲ್ಲಿ ಅದರ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಕೆ ಪಾಟೀಲ್ ಅವರು, "ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಸಂಪುಟ ಸ್ವೀಕರಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ನಾವು ಇದನ್ನು ಅಧ್ಯಯನ ಮಾಡಿ ಚರ್ಚಿಸುತ್ತೇವೆ ಮತ್ತು ನಂತರದ ನಿರ್ಧಾರಗಳನ್ನು ನಿಮಗೆ (ಮಾಧ್ಯಮಕ್ಕೆ) ತಿಳಿಸುತ್ತೇವೆ" ಎಂದರು.

"ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಾವು ಅದನ್ನು ಕೊನೆಯ ವಿಷಯವಾಗಿ ತೆಗೆದುಕೊಂಡಿದ್ದೇವೆ. ವರದಿಯ ಬಗ್ಗೆ ಅಧ್ಯಯನ ಮಾಡಬೇಕು. ಹೀಗಾಗಿ ಮುಂದಿನ ಸಭೆಯಲ್ಲಿ ನಾವು ಅದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ" ಎಂದರು.

ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಅದನ್ನು ಸಲ್ಲಿಸಬೇಕಾದಾಗಲೆಲ್ಲಾ ನಾವು ಅದನ್ನು ಸಲ್ಲಿಸುತ್ತೇವೆ" ಎಂದು ಹೇಳಿದರು.

ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಆಯೋಗವು ಜುಲೈ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಸಂಪುಟಗಳ ವರದಿ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagramನಲ್ಲಿ 100 ಮಿ. ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ

SCROLL FOR NEXT