ಧರ್ಮಸ್ಥಳ ಪ್ರಕರಣದ ದೂರುದಾರ 
ರಾಜ್ಯ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಸಾಕ್ಷಿಯ ಬ್ರೈನ್ ಮ್ಯಾಪಿಂಗ್, ನಾರ್ಕೊ ಪರೀಕ್ಷೆ ಅಗತ್ಯವಿದೆ ಎಂದ ಪೊಲೀಸರು

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಇತ್ತೀಚೆಗೆ ಮಾಹಿತಿ ಲಭ್ಯವಾಗಿದೆ.

ಮಂಗಳೂರು: ಧರ್ಮಸ್ಥಳದಲ್ಲಿ ರಹಸ್ಯವಾಗಿ ಹಲವಾರು ಶವಗಳ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಪ್ರಮುಖ ಸಾಕ್ಷಿಯ ಬ್ರೈನ್ ಮ್ಯಾಪಿಂಗ್, ಫಿಂಗರ್‌ಪ್ರಿಂಟ್ ಮತ್ತು ನಾರ್ಕೊ ಅನಾಲಿಸಿಸ್ ಪರೀಕ್ಷೆ ನಡೆಸಲು ಅನುಮತಿ ಕೋರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಇತ್ತೀಚೆಗೆ ಮಾಹಿತಿ ಲಭ್ಯವಾಗಿದೆ. ಆದರೆ ಪ್ರಾಥಮಿಕ ಸಾಕ್ಷಿ ಅಥವಾ ಅವರ ಕಾನೂನು ಪ್ರತಿನಿಧಿಗಳು ಈ ವಿಚಾರವನ್ನು ತನಿಖಾ ತಂಡಕ್ಕೆ ಬಹಿರಂಗಪಡಿಸಿಲ್ಲ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಇನ್ನಷ್ಟು ಆಳವಾಗಿಸಲು, ತನಿಖಾಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ದೂರುದಾರರ ಸಮ್ಮತಿ ಇದ್ದರೆ, ಅವರ ಬ್ರೈನ್ ಮ್ಯಾಪಿಂಗ್, ಫಿಂಗರ್‌ಪ್ರಿಂಟ್ ಮತ್ತು ನಾರ್ಕೋ ಅನಾಲಿಸಿಸ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡುವಂತೆ ಕೋರಲಾಗಿದೆ. ಈ ಪರೀಕ್ಷೆಗಳು ಪ್ರಕರಣದ ತನಿಖೆಯಲ್ಲಿ ಹೊಸ ಆಯಾಮ ನೀಡುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಸ್ಥಳೀಯ ಮೂಲಗಳಿಂದ ಬಂದಿರುವ ಗೌಪ್ಯ ಮಾಹಿತಿಯ ಪ್ರಕಾರ, ಸಮಾಧಿ ಹೊರತೆಗೆಯುವ ಪ್ರಕ್ರಿಯೆ ಮುಗಿದ ನಂತರ ಪ್ರಮುಖ ಸಾಕ್ಷಿ ಪರಾರಿಯಾಗಬಹುದು ಎಂಬ ಕಳವಳವನ್ನು ಹುಟ್ಟುಹಾಕಿದೆ. ಇದೇ ಕಾರಣಕ್ಕಾಗಿ, ಸೂಕ್ತ ತನಿಖಾ ಪ್ರಕ್ರಿಯೆಗಳನ್ನು ಅನುಸರಿಸದೆ ಸಮಾಧಿ ಅಗೆಯುವ ಪ್ರಕ್ರಿಯೆಗೆ ಆತುರ ತೋರಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಸಾಧ್ಯತೆಗಳನ್ನು ತನಿಖಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ದೂರುದಾರರ ಪರ ವಕೀಲರಿಗೂ ಈ ವಿಷಯವನ್ನು ತಿಳಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಇನ್ನು ಸಮಾಧಿ ಅಗೆಯುವ ಪ್ರಕ್ರಿಯೆಯ ಬಗ್ಗೆ ಸ್ಪಷ್ಟನೆ ನೀಡಿರುವ ತನಿಖಾಧಿಕಾರಿಗಳು, ತನಿಖೆಯ ಯಾವ ಹಂತದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆಯು ಸೂಕ್ತವೆಂದು ನಿರ್ಧರಿಸಲಾಗುತ್ತದೆಯೋ, ಆಗ ಸೂಕ್ತ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT