ಮುಳ್ಳಯ್ಯನಗಿರಿ 
ರಾಜ್ಯ

ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಶಾಕ್: ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅಧಿಕಾರಿಗಳ ಕ್ರಮ; ವಾರಾಂತ್ಯದಲ್ಲಿ 600 ವಾಹನಗಳಿಗಷ್ಟೇ ಅವಕಾಶ!

ಕಳೆದ 6 ತಿಂಗಳಿನಿಂದ ಎರಡೂವರೆ ಲಕ್ಷದಷ್ಟು ವಾಹನಗಳ ಸಂಚಾರ ಗಿರಿ ಮಾರ್ಗದಲ್ಲಿ ಕಂಡು ಬಂದಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಸಮಯವಾದ್ದರಿಂದ ವಾಹನಗಳ ಸಂಖ್ಯೆ ಕಡಿಮೆಯಿತ್ತು.

ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ವಾರಾಂತ್ಯದ ವೇಳೆ ಎದುರಾಗುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿಎನ್ ಅವರು ಬುಧವಾರ ಹೊಸ ಸಂಚಾರ ನಿಯಮಗಳನ್ನು ಪ್ರಕಟಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಂಡಿದ್ದು, ಎರಡು ಸ್ಟಾಟ್‌ಗಳಲ್ಲಿ ಪ್ರತೀ ದಿನ ಮುಳ್ಳಯ್ಯನಗಿರಿ ಭಾಗಕ್ಕೆ ವಾಹನಗಳನ್ನು ಬಿಡಲಾಗುವುದು ಎಂದು ಹೇಳಿದರು.

ಗಿರಿಗೆ ವಾಹನಗಳ ದಟ್ಟಣೆ ತಡೆಯುವ ಸಲುವಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ 600 ವಾಹನಗಳನ್ನು ಹಾಗೂ ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆವರೆಗೆ 600 ವಾಹನಗಳನ್ನು ಎರಡು ಸ್ಲಾಟ್‌ಗಳಲ್ಲಿ ಬಿಡಲಾಗುವುದು. ಮಧ್ಯಾಹ್ನ ಬಿಡುವು ನೀಡಲಾಗುವ ಒಂದು ಗಂಟೆ ಅವಧಿಯಲ್ಲಿ ಮೇಲೆ ತೆರಳುವ ವಾಹನಗಳು ಮರಳಿ ಬರಲು ಅವಕಾಶ ಕಲ್ಪಿಸಲಾಗುವುದು.

ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರಿಗೆ ಸೀತಾಳಯ್ಯನಗಿರಿಯಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಕಲಿಸಿ ಪ್ರವಾಸಿಗರು ಚಾರಣ ಮುಖಾಂತರ, ಇಲಾಖೆಯಿಂದ ಅನುಮತಿಸಿದ ಜೀಪುಗಳು, ಇಲಾಖೆಯಿಂದ ನಿಯೋಜಿಸಲಾದ ಟಿ.ಟಿ. ಹಾಗೂ ತೂಫಾನ್ ವಾಹನಗಳಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ವಾಹನಗಳಿಗೆ ಮುಂಗಡ ಬುಕ್ಕಿಂಗ್ ವ್ಯವಸ್ಥೆಯೂ ಇರಲಿದೆ. ರೆಡ್ ಅಲರ್ಟ್ ಸಂದರ್ಭ ಹಾಗೂ ಪೊಲೀಸರಿಂದ ಸೂಚನೆಗಳೇನಾದರೂ ಇದ್ದಲ್ಲಿ ಅಥವಾ ಸ್ಥಳೀಯವಾಗಿ ಸೀತಾಳಯ್ಯನಗಿರಿ ಇಲ್ಲವೇ ಐಡಿ ಪೀಠದ ಜಾತ್ರೆಯ ಸಂದರ್ಭದಲ್ಲಿ ಪ್ರವಾಸಿಗರಿಗೆ ಬುಕ್ಕಿಂಗ್ ಅವಕಾಶ ಇರುವುದಿಲ್ಲ. ಜಾತ್ರೆ ಸಂದರ್ಭದಲ್ಲಿ ಉಚಿತವಾಗಿ ಭಕ್ತರು ಹಾಗೂ ಸ್ಥಳೀಯರಿಗೆ ತೆರಳಲು ಅವಕಾಶ ಕಲ್ಪಿಸಲಾಗುವುದು.

ಕಳೆದ 6 ತಿಂಗಳಿನಿಂದ ಎರಡೂವರೆ ಲಕ್ಷದಷ್ಟು ವಾಹನಗಳ ಸಂಚಾರ ಗಿರಿ ಮಾರ್ಗದಲ್ಲಿ ಕಂಡು ಬಂದಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಸಮಯವಾದ್ದರಿಂದ ವಾಹನಗಳ ಸಂಖ್ಯೆ ಕಡಿಮೆಯಿತ್ತು. ಸುದೀರ್ಘ ವಾರಾಂತ್ಯದ ಸಮಯದಲ್ಲಿ ಟಿಟಿ ವಾಹನಗಳು, ಮಿನಿ ಬಸ್‌ಗಳ ದಟ್ಟಣೆ ಹೆಚ್ಚುತ್ತಿದೆ. ಗಿರಿ ರಸ್ತೆ ಅತ್ಯಂತ ಕಿರು ಮಾರ್ಗವಾಗಿರುವುದರಿಂದ ಸಮಸ್ಯೆಯಾಗುತ್ತಿದೆ. ಭೂಗರ್ಭ ಶಾಸ್ತ್ರಜ್ಞರು ಇತ್ತೀಚೆಗೆ ಆಗಮಿಸಿ ಗಿರಿಭಾಗ ವೀಕ್ಷಿಸಿದ ವೇಳೆ ಭೂಕುಸಿತದ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ಮಾರ್ಗದಲ್ಲಿ ಹೆಚ್ಚು ವಾಹನಗಳ ಸಂಚಾರ ಸೂಕ್ತವಲ್ಲ. ಇದು ಭೂಕುಸಿತ ಹೆಚ್ಚಾಗಬಹುದು ಎಂದು ವರದಿ ನೀಡಿದ್ದಾರೆ.

ಮಾರ್ಚ್‌ನಲ್ಲಿ ಮಳೆ ಪ್ರಾರಂಭವಾದಾಗ ಅಲ್ಲಲ್ಲಿ ಸಣ್ಣ ಮಟ್ಟದ ಭೂಕುಸಿತ ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಮೂರು ಭಾಗವಾಗಿ ವಾಹನಗಳ ದಟ್ಟಣೆ ನಿಯಂತ್ರಿಸಬೇಕು ಎಂದು ಜಿಲ್ಲಾಮಟ್ಟದ ಸಮಿತಿಯಲ್ಲಿ ಸದಸ್ಯರ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು.

ಕೈಮರ ಚೆಕ್‌ಪೋಸ್ಟ್ ಅನ್ನು ಎನ್‌ಎಂಡಿಸಿ ಸರ್ಕಲ್‌ಗೆ ಬದಲಾವಣೆ ಮಾಡಲಾಗುತ್ತಿದೆ. ಈ ಹಿಂದೆ ಇದ್ದ ಕೈಮರ ಚೆಕ್‌ಪೋಸ್ಟ್ ಅನ್ನು ಪೊಲೀಸ್ ಚೌಕಿಯನ್ನಾಗಿ ಮಾಡಲಾಗುವುದು. ಒಂದು ವೇಳೆ ಹೆಚ್ಚಿನ ಪ್ರವಾಸಿಗರು ಬಂದಲ್ಲಿ ತರೀಕೆರೆ ರಸ್ತೆಯ ಮೂಲಕ ಇತರೆ ಪ್ರವಾಸಿ ತಾಣಗಳಿಗೆ ತೆರಳಲು ಅನುವು ಮಾಡಿಕೊಡಲಾಗುವುದು. ಎನ್ಎಂಡಿಸಿ ಸರ್ಕಲ್ ಎಲ್ಲಾ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಸರ್ಕಲ್ ಆಗಲಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಗಿರಿ ರಸ್ತೆ ಅಗಲೀಕರಣ ಮಾಡಲಾಗಿದ್ದರೂ ಮಳೆ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಾಧ್ಯವಾಗಿಲ್ಲ. ಹೀಗಿದ್ದರೂ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಪಟ್ಟಿ ಪಡೆದು ಒಂದು ವೇಳೆ 15-20 ದಿನಗಳ ಕಾಲ ವಾತಾವರಣ ತಿಳಿಯಾದಲ್ಲಿ ಡಾಂಬರು ಹಾಕಲಾಗುವುದು ಎಂದು ತಿಳಿಸಿದರು.

ಸೀತಾಳಯ್ಯನ ಗಿರಿಯಲ್ಲಿ ಶೌಚಾಲಯವನ್ನು ಸಂಪೂರ್ಣ ನವೀಕರಣ ಮಾಡಲಾಗುವುದು. ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿ ಭಾಗದಲ್ಲಿ ಹಿಂದೆ ಗ್ರಾಪಂನಿಂದ 35 ಅಂಗಡಿಗಳಿಗೆ ಲೈಸೆನ್ಸ್‌ ನೀಡಲಾಗಿತ್ತು. ಅವುಗಳನ್ನು ಗಮನ ದಲ್ಲಿಟ್ಟುಕೊಂಡು ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಗೆ ಬಂದಿರುವ ಅನುದಾನ ಆಧರಿಸಿ ಸ್ಥಳದಲ್ಲಿ ಫುಡ್ ಕೋರ್ಟ್ ಮಾದರಿ ಯಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು. ಸ್ಥಳೀಯರಿಗೆ ಅನುಕೂಲವಾಗುವಂತೆ ನಿಗದಿಪಡಿಸಿದ ದಾಖಲಾತಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿ ಪಡೆಯುವುದು ಅಗತ್ಯ. ಹಾಗಿದ್ದಾಗ ಈಮಾರ್ಗದಲ್ಲಿ ಸಂಚರಿಸಲು ಸ್ಥಳೀಯರಿಗೆ ಸಮಸ್ಯೆಯಾಗದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

'HAL ನಿರ್ಮಿತ ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ ಗಳು ಹಸ್ತಾಂತರಕ್ಕೆ ಸಿದ್ಧ': ರಕ್ಷಣಾ ಕಾರ್ಯದರ್ಶಿ

SCROLL FOR NEXT