ನಿತೀಶ್ ಕುಮಾರ್ 
ರಾಜ್ಯ

ಉಚಿತ ವಿದ್ಯುತ್ ಪ್ರಸ್ತಾವನೆಗೆ ಬಿಹಾರ ಸಚಿವ ಸಂಪುಟ ಅನುಮೋದನೆ; ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ರಾಜ್ಯಾದ್ಯಂತ ಗೃಹಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಪ್ರಸ್ತಾವನೆಗೆ ಇಂದು ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಘೋಷಣೆ ಮಾಡಿದ್ದ ಉಚಿತ ವಿದ್ಯುತ್ ಯೋಜನೆಗೆ ಶುಕ್ರವಾರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಆಗಸ್ಟ್ 1 ರಿಂದ ರಾಜ್ಯಾದ್ಯಂತ ಗೃಹಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಪ್ರಸ್ತಾವನೆಗೆ ಇಂದು ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಇಲಾಖೆಯ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.

"ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬಿಹಾರ ರಾಜ್ಯ ವಿದ್ಯುತ್ ಹೋಲ್ಡಿಂಗ್ ಕಾರ್ಪೊರೇಷನ್ ಲಿಮಿಟೆಡ್‌ಗೆ ವಿದ್ಯುತ್ ಬಳಕೆಗಾಗಿ ಹೆಚ್ಚುವರಿಯಾಗಿ 3,797 ಕೋಟಿ ರೂ.ಗಳನ್ನು ಪಾವತಿಸಲಿದೆ" ಎಂದು ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಐಪಿಆರ್‌ಡಿ) ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಿರ್ಧಾರದಿಂದ ರಾಜ್ಯದ ಒಟ್ಟು 1.67 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ AUDIO ವೈರಲ್, ಜೆಡಿಎಸ್ ಕಿಡಿ

3ನೇ ಏಕದಿನ: 'ರೋ-ಕೋ' ಭರ್ಜರಿ ಕಮ್ ಬ್ಯಾಕ್, ಸಿಡ್ನಿಯಲ್ಲಿ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ

'ಓಪನ್ನಾಗಿ ಹೇಳ್ತಿದ್ದೀನಿ, ಯಾರೂ ಬಿ ಖಾತಾದಿಂದ ಎ ಖಾತಾಗೆ ದುಡ್ಡು ಕಟ್ಟಬೇಡಿ, ಇದು ಸರ್ಕಾರದ ಬಹುದೊಡ್ಡ ಲೂಟಿ': ಹೆಚ್ ಡಿ ಕುಮಾರಸ್ವಾಮಿ

ಬಿಹಾರ ಚುನಾವಣೆ: ಪ್ರಮುಖ ಯಾದವ್ ನಾಯಕರಿಗೆ ಟಿಕೆಟ್ ನಿರಾಕರಣೆ; NDAಗೆ ಹಿನ್ನಡೆ

ಬಾಲಿವುಡ್ ಹಿರಿಯ ನಟ ಸತೀಶ್ ಶಾ ನಿಧನ

SCROLL FOR NEXT