ಕಾಂಗ್ರೆಸ್ ಶಾಸಕ ನಂಜೇಗೌಡ 
ರಾಜ್ಯ

ಕೋಮುಲ್ ನೇಮಕಾತಿಯಲ್ಲಿ ಹಗರಣ: ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಸೇರಿದ 1.32 ಕೋಟಿ ರೂ ಆಸ್ತಿ ಇಡಿ ಜಪ್ತಿ!

ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ನಂಜೇಗೌಡ ಅವರು ಕೋಮುಲ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ

ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೋಮುಲ್) 2023ರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಸೇರಿದ ರೂ. 1.32 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ.

ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ನಂಜೇಗೌಡ ಅವರು ಕೋಮುಲ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಮುಲ್ ನಲ್ಲಿ 81ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗಿತ್ತು. ಆದರೆ, ಶಾಸಕ ಕೆ.ವೈ ನಂಜೇಗೌಡ ನೇತೃತ್ವದ ಸಮಿತಿಯು ಕೆಲವು ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಟ್ಟು ಅವರಿಂದ ರೂ. 30 ಲಕ್ಷ ಹಣ ಪಡೆಯಲಾಗಿದೆ ಎಂದು ಇಡಿ ಆರೋಪಿಸಿದೆ.

ನಂಜೇಗೌಡ ಅವರಿಗೆ ಸೇರಿದ ರೂ. 1.32 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ತಾತ್ಕಾಲಿಕ ಆದೇಶ ಹೊರಡಿಸಿದೆ.

150 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್‌ಎ ಕಾಯ್ದೆ 2002 ರಡಿ ಇಡಿ ಅಧಿಕಾರಿಗಳು ಜನವರಿ 8 ರಂದು ಶೋಧ ಕಾರ್ಯಾಚರಣೆ ನಡೆಸಿದ್ದರು. ತದನಂತರ ಇಡೀ ಕೋಮುಲ್ ನೇಮಕಾತಿ ಹಗರಣವನ್ನು ತನಿಖೆಗೆ ಕೈಗೆತ್ತಿಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT