ಮೈಸೂರು: ನಾಗರಿಕ ಅಧಿಕಾರಿಗಳ ಉದಾಸೀನತೆ ಮತ್ತು ನಿಷ್ಕ್ರಿಯತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಎಚ್‌ಡಿ ಕೋಟೆ ಪುರಸಭೆ ಸದಸ್ಯರು ಅರೆಬೆತ್ತರಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.
ಮಿಲ್ ನಾಗರಾಜ್ ಅವರು ಪುರಸಭೆ ಕಚೇರಿಯ ಮುಂದೆ ಅರೆನಗ್ನ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಜ್ ಅವರು, ಕೋಟ್ಯಾಂತರ ರೂಪಾಯಿ ಮೌಲ್ಯದ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ವಿಳಂಬ ಮಾಡಲಾಗಿದ್ದು, ಸಂಪೂರ್ಣವಾಗಿ ನಿರ್ಪಕ್ಷಿಸಲಾಗಿದೆ. ಇದರಿಂದ ನಗರ ಸಂಕಷ್ಟಕ್ಕೆ ಸಿಲುಕಿದೆ. ಹಣ ಮಂಜೂರಾದರೂ ಅಭಿವೃದ್ಧಿ ಕಾರ್ಯಗಳ ಕೈಗೆತ್ತಿಕ್ಕೊಳ್ಳುತ್ತಿಲ್ಲ. ಒಳಚರಂಡಿ ವ್ಯವಸ್ಥೆಗಳ ನಿರ್ಮಾಣ ಪ್ರಾರಂಭವಾಗಿಲ್ಲ, ಸ್ವಚ್ಛತಾ ಅಭಿಯಾನಗಳು ಅನಿಯಮಿತವಾಗಿದ್ದು, ಮೂಲಭೂತ ನಾಗರಿಕ ನಿರ್ವಹಣೆಯನ್ನು ಗಾಳಿಗೆ ತೂರಲಾಗಿದೆ ಎಂದು ಹೇಳಿದರು.
ಅಮೃತ್ (ಅಟಲ್ ಮಿಷನ್ ಫಾರ್ ರಿಜುವನೇಷನ್ ಅಂಡ್ ಅರ್ಬನ್ ಟ್ರಾನ್ಸ್‌ಫರ್ಮೇಷನ್) ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.32 ಕೋಟಿ ಹಂಚಿಕೆ ಮಾಡಲಾಗಿದ್ದು, ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ, ಯಾವುದೇ ಪ್ರಗತಿ ಕಂಡು ಬಂದಿಲ್ಲ ಎಂದು ದೂರಿದರು.