ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

Video: 'ನಾಚಿಕೆಯಾಗಲ್ವ.. ಕಚೇರಿಯಲ್ಲಿ ಏನು ನಡೀತಿದೆ ಅನ್ನೋ ಪರಿಜ್ಞಾನ ಇಲ್ವಾ?; ಅಧಿಕಾರಿಗಳ ಚಳಿ ಬಿಡಿಸಿದ ಸಚಿವ Krishna Byre Gowda

ಭೂಸುರಕ್ಷಾ ಯೋಜನೆ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದರೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಉದ್ದೇಶಪೂರಕವಾಗಿ ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ..

ಬೆಂಗಳೂರು: ಭೂಸುರಕ್ಷಾ ಯೋಜನೆ ವಿಚಾರವಾಗಿ ಕರ್ನಾಟಕ ಕಂದಾಯ ಸಚಿವ ಕೃಷ್ಣಭೈರೇಗೌಡ ಶುಕ್ರವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.

ಹೌದು.. ಭೂಸುರಕ್ಷಾ ಯೋಜನೆ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದರೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಉದ್ದೇಶಪೂರಕವಾಗಿ ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡರವರು ತಹಸೀಲ್ದಾರ್‌ ಹಾಗೂ ಶಿರಸ್ತೇದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವಿಕಾಸಸೌಧದಲ್ಲಿ ಇಂದು ನಡೆದ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್‌, ಉಪ ತಹಸೀಲ್ದಾರ್‌ಗಳ ಸಭೆಯಲ್ಲಿ ಮಾತನಾಡಿದ ಅವರು, 'ಭೂಸುರಕ್ಷಾ ಯೋಜನೆಯಡಿ ಭೂದಾಖಲೆಗಳು ಡಿಜಿಟಲೀಕರಣಗೊಳ್ಳುವ ಪ್ರಕ್ರಿಯೆ ಇಡೀ ರಾಜ್ಯದಲ್ಲಿ ನಡೆಯುತ್ತಿದೆ. ಆದರೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಉದ್ದೇಶಪೂರಕವಾಗಿ ಆನ್‌ಲೈನ್‌ನಲ್ಲಿ ದೃಢೀಕರಿಸಿದ ದಾಖಲೆಗಳನ್ನು ನೀಡಲು ತಡೆಹಿಡಿಯಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆನ್ಲೈನ್ ದಾಖಲೆ ವಿತರಣೆಗೆ ಅಡ್ಡಿ ಏನು?

ಅಂತೆಯೇ ರಾಜ್ಯಾದ್ಯಂತ 21 ಲಕ್ಷ ಪುಟಗಳಷ್ಟು ಆನ್‌ಲೈನ್‌ ಮೂಲಕ ದೃಢೀಕರಿಸಿದ ದಾಖಲೆಗಳನ್ನು ವಿತರಣೆ ಮಾಡಿದಾಗ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೇವಲ 25 ಪುಟಗಳಷ್ಟು ಮಾತ್ರ ದಾಖಲೆಗಳನ್ನು ನೀಡಲಾಗಿತ್ತು. ವಿಶ್ವದಲ್ಲಿಯೇ ಐಟಿ ರಾಜಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರಿನಲ್ಲಿ ಆನ್‌ಲೈನ್‌ ಮೂಲಕ ದಾಖಲಾತಿಗಳನ್ನು ವಿತರಣೆ ಮಾಡಲು ಇರುವ ಅಡ್ಡಿಯಾದರೂ ಏನು ಎಂದು ಅಧಿಕಾರಿಗಳನ್ನು ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡರು.

ರಾಜ್ಯದ ಎಲ್ಲೆಡೆ ಹೆಚ್ಚೂ ಕಡಿಮೆ ಯಶಸ್ವಿಯಾಗಿ ಆನ್‌ಲೈನ್‌ ಮೂಲಕ ದೃಢಿಕರಿಸಿದ ದಾಖಲೆ ವಿತರಿಸಲಾಗುತ್ತಿದೆ. ಆದರೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ತಹಸೀಲ್ದಾರ್‌, ಗ್ರೇಡ್‌-2 ತಹಸೀಲ್ದಾರ್‌, ರೆಕಾರ್ಡ್‌ ರೂಂ ಕೀಪರ್‌ರ‍ಸಗಳು ಸೇರಿ ದಾಖಲೆಗಳನ್ನು ನೀಡುವುದಕ್ಕೆ ತಡೆಯೊಡ್ಡುತ್ತಿದ್ದಾರೆ. ಈ ವಿಚಾರದ ಬಗ್ಗೆ ಬೇರೆಯ ರೂಪದಲ್ಲಿ ಹೇಳಲು ಸಾಧ್ಯವಿಲ್ಲ.

ತಾಲೂಕು ಕಚೇರಿಗಳಲ್ಲಿ ಅಧಿಕಾರಿಗಳು ಇರುವುದಿಲ್ಲ. ಬೇರೆ ಎಲ್ಲಿ ಕೆಲಸವಿರುತ್ತದೆ. ಮಾತೆತ್ತಿದರೆ ನ್ಯಾಯಾಲಯದ ಕೇಸ್‌ ವಿಚಾರವನ್ನು ಪ್ರಸ್ತಾಪ ಮಾಡಲಾಗುತ್ತದೆ. ಕಚೇರಿಯಿಂದ ಹೊರಹೋಗುವ ಚಲನವಲನಗಳ ದಾಖಲಾತಿ ಮಾಹಿತಿ ಇರುವುದಿಲ್ಲ. ಕಂದಾಯ ಇಲಾಖೆಯ ಪ್ರದಾನ ಕಾರ್ಯದರ್ಶಿ ನಿಯಮಿತವಾಗಿ ನ್ಯಾಯಾಲಯದ ಪ್ರಕರಣಗಳಲ್ಲಿ ಹಾಜರಾಗುತ್ತಾರೆ. ಅವರಿಗೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರು ಮಾಹಿತಿ ನೀಡಲು ನೆರವಾಗುತ್ತಾರೆ ಎಂದು ಹೇಳಿದರು.

ನಾಚಿಕೆಯಾಗಲ್ವ.. ಕಚೇರಿಯಲ್ಲಿ ಏನು ನಡೀತಿದೆ ಅನ್ನೋ ಪರಿಜ್ಞಾನ ಇಲ್ವಾ?

ತಾಲ್ಲೂಕು ಕಚೇರಿ ಬಿಟ್ಟು ಬೇರೆಲ್ಲಿ ನಿಮಗೆ ಕಚೇರಿ ಇದೆಯೋ ಗೊತ್ತಿಲ್ಲ. ತಾಲೂಕು ಕಚೇರಿಗಳಲ್ಲಿ ಕೂರುವುದೇ ಇಲ್ಲ ಎಂದರೆ ಹೇಗೆ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇದುವರೆಗೂ ಎಲ್ಲವನ್ನೂ ಸಹಿಸಿಕೊಂಡಿದ್ದೇವೆ. ಆದರೆ ಮಿತಿಮೀರಿದರೆ ಸಹಿಸಲಾಗುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. ಇನ್ನುಮುಂದೆ ಈ ಅವ್ಯವಸ್ಥೆ ಸರಿ ಹೋಗದಿದ್ದರೆ ಸೂಕ್ತ ಪರಿಣಾಮ ಆಗಲೇಬೇಕು. ಸುಧಾರಣೆ ತರಲಾಗದಿದ್ದರೆ ಮುಂದೇನು ಆಗಬೇಕು ಎಂಬುದು ನಿರ್ಧಾರ ಮಾಡಲಾಗುವುದು. ಎಲ್ಲರಿಗೂ ಮೀರಿದವರಿಗೆ ಭೂಮಿಗೆ ಇಳಿಸುವುದೂ ಗೊತ್ತಿದೆ. ಚೆನ್ನಾಗಿ ಕೆಲಸ ಮಾಡುವ ಒಳ್ಳೆಯವರಿಗೆ ಮೆಚ್ಚುಗೆ ಸೂಚಿಸುವುದು ಗೊತ್ತಿದೆ ಎಂದು ತೀಕ್ಷ್ಣವಾಗಿ ಎಚ್ಚರಿಕೆ ನೀಡಿದರು.

ಭೂಸುರಕ್ಷಾ ಯೋಜನೆ ಅನುಷ್ಠಾನದ ವಿಳಂಬಕ್ಕೆ ಸರಿಯಾದ ಕಾರಣ ಹಾಗೂ ಸೂಕ್ತ ಉತ್ತರ ನೀಡಿ ಎಂದರೆ ಇಲ್ಲಸಲ್ಲದ ಸಬೂಬು ಹೇಳುತ್ತೀರ. ನಿಮಗೆ ನಾಚಿಕೆಯಾಗುವುದಿಲ್ಲವೇ?, ನಿಮ ಕಚೇರಿಯಲ್ಲಿ ಏನು ನಡೆಯುತ್ತಿದೆ ಎಂಬುದರ ಪರಿಜ್ಞಾನವೂ ನಿಮಗಿಲ್ಲ, ಎಲ್ಲಿ, ಏನು ಮಾತನಾಡುತ್ತಿದ್ದೇವೆ ಎಂಬ ಅರಿವು ಇದೆಯೇ? ಎಂದು ಹಿಗ್ಗಾಮುಗ್ಗಾ ತರಾಟೆಗೆ ಸಚಿವರು ತೆಗೆದುಕೊಂಡರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT