ಶುಭಾಂಶು ಶುಕ್ಲಾ 
ರಾಜ್ಯ

Axiom-4 mission: ಶುಭಾಂಶು ಶುಕ್ಲಾ ಆರೋಗ್ಯ ಸ್ಥಿರವಾಗಿದೆ; ISRO

ಮೈಕ್ರೋಗ್ರಾವಿಟಿಯ ಅಡ್ಡ ಪರಿಣಾಮಗಳ ಬಗ್ಗೆ ಹೃದಯರಕ್ತನಾಳ ಪರೀಕ್ಷೆ, ಸ್ನಾಯು ಮತ್ತು ಮೂಳೆ ಪರೀಕ್ಷೆ ಮತ್ತು ಮನೋಪರೀಕ್ಷೆಗಳನ್ನು ನಡೆಸಲಾಯಿತು.

ಬೆಂಗಳೂರು: ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡಿಲ್ಲ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ರೋ, ‘ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ಆಗಮಿಸಿದ ಬಳಿಕ ಅವರಿಗೆ ಪ್ರಾಥಮಿಕ ಆರೋಗ್ಯ ಪರೀಕ್ಷೆ ನಡೆಸಲಾಯಿತು. ಮೈಕ್ರೋಗ್ರಾವಿಟಿಯ ಅಡ್ಡ ಪರಿಣಾಮಗಳ ಬಗ್ಗೆ ಹೃದಯರಕ್ತನಾಳ ಪರೀಕ್ಷೆ, ಸ್ನಾಯು ಮತ್ತು ಮೂಳೆ ಪರೀಕ್ಷೆ ಮತ್ತು ಮನೋಪರೀಕ್ಷೆಗಳನ್ನು ನಡೆಸಲಾಯಿತು. ಈ ವೇಳೆ ಯಾವುದೇ ತೊಂದರೆಗಳು ಕಾಣಿಸಿಕೊಳ್ಳಲಿಲ್ಲ. ಎಲ್ಲಾ ಗಗನಯಾತ್ರಿಗಳನ್ನು 1 ವಾರದ ಪುನಶ್ಚೇತನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ.

ಭೂಮಿಗೆ 18 ದಿನ ಕಳೆದ ನಂತರ ಬಂದಿರುವ ಶುಭಾಂಶು ಶುಕ್ಲಾ ಹಾಗೂ ಇತರ ಗಗನಯಾನಿಗಳು ಕೆಲವು ದಿನ ಸವಾಲಿನ ಸ್ಥಿತಿ ಎದುರಿಸಲಿದ್ದಾರೆ.

ನಿರ್ವಾತ ಪ್ರದೇಶ ವಾಸದಿಂದ ಗುರುತ್ವಾಕರ್ಷಣೆಯಿರುವ ಮಾತೃಗ್ರಹಕ್ಕೆ ಬಂದಿರುವ ಶುಭಾಂಶು, ಇಲ್ಲಿನ ವಾತಾವರಣಕ್ಕೆ ಒಗ್ಗಿಕೊಳ್ಳು​ವಲ್ಲಿ ಕೆಲವು ಸವಾಲು ಎದುರಿಸಬೇಕಾಗುತ್ತದೆ. ಹೀಗಾಗಿ ಎಲ್ಲಾ ಯಾತ್ರಿಕರಿಗೆ 1 ವಾರ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ನಂತರ ಅವರು ಶಿಬಿರದಿಂದ ಹೊರಬಂದು ಸಾರ್ವಜನಿಕರ ಜತೆ ಬೆರೆಯಲಿದ್ದಾರೆ.

20 ದಿನಗಳ ಬಾಹ್ಯಾಕಾಶ ಪ್ರಯಾಣದಲ್ಲಿ ಶುಕ್ಲಾ ಹಾಗೂ ಅವರ ತಂಡ 18 ದಿನಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದರು. ಸುಮಾರು 60ಕ್ಕೂ ಹೆಚ್ಚು ಪ್ರಯೋಗಗಳನ್ನು ನಡೆಸಿದರು.

ಇವುಗಳಲ್ಲಿ ಇಸ್ರೋ ಮತ್ತು ನಾಸಾ ಪ್ರಯೋಗಗಳೂ ಇದ್ದವು. ಈ ಅವಧಿಯಲ್ಲಿ ಇವರು 320 ಬಾರಿ ಭೂಮಿಯನ್ನು ಸುತ್ತಿದ್ದಾರೆ. ಹಾಗೆಯೇ 135.18 ಲಕ್ಷ ಕಿಲೋ ಮೀಟರ್ ದೂರವನ್ನು ಕ್ರಮಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT