ಬಿಬಿಎಂಪಿ ಕೇಂದ್ರ ಕಚೇರಿ 
ರಾಜ್ಯ

ಗ್ರೇಟರ್ ಬೆಂಗಳೂರು: ಐದು ನಗರ ಪಾಲಿಕೆಗಳ ರಚನೆ; ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು ಪಶ್ಚಿಮ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕೇಂದ್ರ ನಗರ ಪಾಲಿಕೆಗಳನ್ನಾಗಿ ವಿಭಜಿಸುವುದಾಗಿ ಪ್ರಸ್ತಾಪಿಸಲಾಗಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರಿನ 'ಸುಗಮ' ಆಡಳಿತಕ್ಕಾಗಿ ಬಿಬಿಎಂಪಿಯನ್ನು ಐದು ನಗರ ಪಾಲಿಕೆಗಳಾಗಿ ವಿಭಜಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರು ಪಶ್ಚಿಮ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕೇಂದ್ರ ನಗರ ಪಾಲಿಕೆಗಳನ್ನಾಗಿ ವಿಭಜಿಸುವುದಾಗಿ ಪ್ರಸ್ತಾಪಿಸಲಾಗಿದೆ.

ಶೆಡ್ಯೂಲ್ -1ರಲ್ಲಿ ಪ್ರತಿಯೊಂದು ನಗರ ಪಾಲಿಕೆಗಳ ವ್ಯಾಪ್ತಿಯನ್ನು ಪಟ್ಟಿ ಮಾಡಲಾಗಿದೆ. ಜನಸಂಖ್ಯೆ, ಪ್ರದೇಶ, ಜನಸಾಂದ್ರತೆ, ಆದಾಯ, ಕೃಷಿಯೇತರ ಚಟುವಟಿಕೆಗಳ ಶೇಕಡಾವಾರು ಆದಾಯ ಮತ್ತು ಪ್ರದೇಶದಲ್ಲಿನ ಆರ್ಥಿಕ ಪ್ರಾಮುಖ್ಯತೆ ಮತ್ತು ಲಭ್ಯವಿರುವ ಮೂಲಸೌಕರ್ಯಗಳನ್ನು ಗಣನೆಗೆ ತೆಗೆದುಕೊಂಡ ನಂತರ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಸೆಕ್ಷನ್ 7(1) ಮತ್ತು 5(1) ರಲ್ಲಿ ಪ್ರದತ್ತವಾದ ಅಧಿಕಾರದ ಅನ್ವಯ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅಧಿಸೂಚನೆಯಲ್ಲಿ ಶೆಡ್ಯೂಲ್ 1ರಡಿ, ಐದು ಪಾಲಿಕೆಗಳ ವ್ಯಾಪ್ತಿಯನ್ನು ವಿವರವಾಗಿ ಪಟ್ಟಿ ಮಾಡಲಾಗಿದೆ.ಈ ಅಧಿಸೂಚನೆ ಪ್ರಕಟಿಸಿದ ದಿನಾಂಕದಿಂದ 30 ದಿನಗಳಲ್ಲಿ ಸಾರ್ವಜನಿಕರಿಂದ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರ ಆಹ್ವಾನಿಸಿದೆ. ಅವಧಿ ಮುಗಿಯುವ ಮುನ್ನಾ ಸ್ವೀಕರಿಸಿದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸದ್ಯ ಇರುವ ಬಿಬಿಎಂಪಿ ಕೇಂದ್ರ ಕಚೇರಿಯನ್ನು ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA)ಪ್ರಧಾನ ಕಚೇರಿ ಎಂದು ಗುರುತಿಸಲಾಗುತ್ತದೆ. ಆಗಸ್ಟ್ 11 ರಿಂದ ಮುಂಗಾರು ಅಧಿವೇಶನದಲ್ಲಿ ಐದು ನಗರ ಪಾಲಿಕೆಗಳ ಬಗ್ಗೆ ಚರ್ಚೆಯೂ ಬರಲಿದ್ದು, ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ಸಜ್ಜಾಗಿದೆ.

ಅಧಿಸೂಚನೆ ಹೊರಡಿಸಿದ 30 ದಿನಗಳ ಒಳಗಾಗಿ ಈ ಮಸೂದೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆಗಳು ಮತ್ತು ಅದರ ಗಡಿ ಕುರಿತ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸಸೌಧ, ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿ ಸಲ್ಲಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT