ನಟಿ ರಮ್ಯಾ  
ರಾಜ್ಯ

ಧರ್ಮಸ್ಥಳ ಪ್ರಕರಣ: ಧ್ವನಿಯೆತ್ತಿದ ನಟಿ ರಮ್ಯಾ; ನ್ಯಾಯಯುತ ತನಿಖೆಗೆ ಆಗ್ರಹ

ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಧರ್ಮಸ್ಥಳ ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚು ಪೂಜಿಸುತ್ತಾರೆ.

ಬೆಂಗಳೂರು: ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಧ್ವನಿ ಎತ್ತಿದ್ದು, ನ್ಯಾಯಯುತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಧರ್ಮಸ್ಥಳ ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚು ಪೂಜಿಸುತ್ತಾರೆ. ಹೀಗಾಗಿ ನ್ಯಾಯಯುತ ತನಿಖೆ ನಡೆಯುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರೂ ಕೂಡ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

US President: ಅನಾರೋಗ್ಯದ ವದಂತಿ, ಕೆಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸದ ಡೊನಾಲ್ಡ್ ಟ್ರಂಪ್!

ವಿಜಯಪುರ: 'ಥೈಲ್ಯಾಂಡ್ ಮಾವಿನ ತಳಿ' ಬೆಳೆದು ವರ್ಷವಿಡೀ ಆದಾಯ ಗಳಿಸುವ ರೈತ ನವೀನ್! ಯಶೋಗಾಥೆ

ಮತದಾರರ ಅಧಿಕಾರ ಯಾತ್ರೆಗೆ ಪ್ರತ್ಯೇಕ ತಂಡವಾಗಿ ತೆರಳಿದ CM-DCM: ಕಾಂಗ್ರೆಸ್ ನಲ್ಲಿ ಬದಲಾದ ಸಮೀಕರಣ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!

SCROLL FOR NEXT