ಸಿಎಂ ಸಿದ್ದರಾಮಯ್ಯ 
ರಾಜ್ಯ

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಸಿದ್ದರಾಮಯ್ಯ ಆದೇಶ

ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ.

ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.

ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು "ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು" ತನಿಖೆ ಮಾಡಲು "ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ" ಎಂದು ಶನಿವಾರ ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಧರ್ಮಸ್ಥಳ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿ ನೂರಾರು ಅಪರಿಚಿತ ಶವ ಹೂತಿದ್ದೇನೆ ಎಂದು ಹೇಳುತ್ತಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು.ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.

ಏನಿದು ಪ್ರಕರಣ?

ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟಿದ್ದೆ ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ, ಅಮೆರಿಕದ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?

Pepsi To McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

SCROLL FOR NEXT