ಹೊಳೆಗೆ ಉರುಳಿದ ಖಾಸಗಿ ಬಸ್ 
ರಾಜ್ಯ

ಕಾರವಾರ: ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಉರುಳಿದ ಖಾಸಗಿ ಬಸ್; ಓರ್ವ ಸಾವು, 21 ಮಂದಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಅಗಸೂರು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಹೊತ್ತು ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.

ಕಾರವಾರ: ಸೋಮವಾರ ಬೆಳಗಿನ ಜಾವ ಖಾಸಗಿ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಉರುಳಿಬಿದ್ದ ಪರಿಣಾಮ ಒಬ್ಬರು ಸಾವಿಗೀಡಾಗಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಹುಬ್ಬಳ್ಳಿ ನಿವಾಸಿ ವಿನಾಯಕ ಶಿಂಧೆ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಗಸೂರು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಹೊತ್ತು ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.

ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಚಾಲಕ ಅತಿವೇಗದಿಂದ ಬಸ್ ಚಲಾಯಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ರಸ್ತೆಯಲ್ಲಿದ್ದ ಗುಂಡಿಗಳನ್ನು ತಪ್ಪಿಸಲು ಪ್ರಯತ್ನಿಸುವಾಗ, ಆತನ ನಿಯಂತ್ರಣ ಕಳೆದುಕೊಂಡ ಬಸ್ ಸೇತುವೆಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿ ಹೊಳೆಗೆ ಬಿದ್ದಿದೆ.

ಸ್ಥಳೀಯರ ಸಹಾಯದಿಂದ ಪೊಲೀಸರು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅವರು ಹೇಳಿದರು.

ಕ್ರೇನ್ ಸಹಾಯದಿಂದ ಬಸ್ಸನ್ನು ಹೊಳೆಯಿಂದ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆಗೆ ಭಾರತ ಆಹ್ವಾನಿಸಲಿ: ಪಾಕಿಸ್ತಾನ ಸಚಿವ ಮುಸಾದಿಕ್ ಮಲಿಕ್

Haryana: ಸೇನಾ ತರಬೇತಿ ವೇಳೆ ಭೀಕರ ದುರಂತ: ಟ್ಯಾಂಕ್ ಹರಿದು ಇಬ್ಬರು ಯೋಧರು ಸಾವು

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!

'ರಾಮಾಯಣ' ಸಂಗೀತಕ್ಕಾಗಿ 3 ವರ್ಷ ಮೀಸಲು; 10-12 ಸಿನಿಮಾಗಳ ಆಫರ್ ತಿರಸ್ಕರಿಸಿದ್ದೆ: ಎ.ಆರ್. ರೆಹಮಾನ್

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ; 8 ಮಂದಿ ಸಾವು; ಸಿಎಂ ವಿಜಯ್ ಸಂತಾಪ!