ಬೆಂಗಳೂರು- ಸೇಲಂ ಹೆದ್ದಾರಿಯಲ್ಲಿ ಸರಣಿ ಅಪಘಾತ 
ರಾಜ್ಯ

ಬೆಂಗಳೂರು- ಸೇಲಂ ಹೆದ್ದಾರಿಯಲ್ಲಿ ಸರಣಿ ಅಪಘಾತ: 7 ವರ್ಷದ ಮಗು ಸೇರಿ ಮೂವರ ದುರ್ಮರಣ

ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚೆನ್ನೈ: ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ 7 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯೊಂದು ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಲಾರಿ, 2 ಕಾರು ಹಾಗೂ 1 ಬೈಕ್ ಒಂದಕ್ಕೊಂದು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ 2 ಟ್ರಕ್‌ಗಳ ನಡುವೆ 2 ಕಾರು ಹಾಗೂ ಬೈಕ್ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಕೂಡಲೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಭಾನುವಾರ ರಾತ್ರಿ ವೀಕೆಂಡ್‌ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ವಾಹನಗಳ ದಟ್ಟಣೆಯೂ ಹೆಚ್ಚಾಗಿತ್ತು. ಲಾರಿ ಚಾಲಕನ ಅವಸರದಿಂದ ಅಪಘಾತ ಸಂಭವಿಸಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!