ಸಿದ್ದರಾಮಯ್ಯ 
ರಾಜ್ಯ

MUDA Case: 'ರಾಜಕೀಯ ಪ್ರೇರಿತ ಹಸ್ತಕ್ಷೇಪಕ್ಕೆ ಒಂದು ಹೊಡೆತ'; ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ ನೀಡಿದ್ದ ನೋಟಿಸ್‌ ಅನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನೀಡಿದ್ದ ನೋಟಿಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸ್ವಾಗತಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದಿದ್ದಾರೆ.

ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ ಎಂದು ತಿಳಿಸಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ ನೀಡಿದ್ದ ನೋಟಿಸ್‌ ಅನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇ.ಡಿ ಸಲ್ಲಿಸಿದ್ದ ರಜಾಕಾಲದ ವಿಶೇಷ ಅರ್ಜಿಯನ್ನು (SLP) ವಜಾಗೊಳಿಸಿದೆ.

ಜಾರಿ ನಿರ್ದೇಶನಾಲಯದ (ED) ಬಗ್ಗೆ ನಕಾರಾತ್ಮಕ ಟೀಕೆಗಳನ್ನು ಮಾಡದಂತೆ ನ್ಯಾಯಾಲಯ ಎಚ್ಚರಿಸಿದೆ. ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿರುವ ಆದೇಶದಲ್ಲಿ ಯಾವುದೇ ದೋಷ ಕಂಡುಬಾರದ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಿದೆ.

ಮುಡಾ ಪ್ರಕರಣದಲ್ಲಿ ನ್ಯಾಯವು ಮೇಲುಗೈ ಸಾಧಿಸಿದೆ ಮತ್ತು ಜಾರಿ ನಿರ್ದೇಶನಾಲಯದ ಹಸ್ತಕ್ಷೇಪವನ್ನು ಕೊನೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಮೈಸೂರಿನಲ್ಲಿ 14 ನಿವೇಶನಗಳನ್ನು ಪಡೆದ ಆರೋಪವಿದೆ.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿದ್ದು, ಅವರ ಪತ್ನಿ ಬಿಎಂ ಪಾರ್ವತಿ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.

ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪಾರ್ವತಿ ಮತ್ತು ಬೈರತಿ ಸುರೇಶ್ ಅವರಿಗೆ ನೋಟಿಸ್‌ಗಳನ್ನು ನೀಡಿತ್ತು. ನಂತರ ಅವುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತು. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಇ.ಡಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video