ಸಂಗ್ರಹ ಚಿತ್ರ 
ರಾಜ್ಯ

ಸಣ್ಣ ವ್ಯಾಪಾರಿಗಳಿಗೆ GST ನೋಟಿಸ್: ಜುಲೈ 25ಕ್ಕೆ ವರ್ತಕರ ಮುಷ್ಕರ..!

ನಗರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ರಾಜ್ಯಾದ್ಯಂತ ಲಕ್ಷಾಂತರ ಸಣ್ಣ ವ್ಯಾಪಾರ ಮಾಲೀಕರು ಮತ್ತು ಅವರ ಕುಟುಂಬಗಳು ಪ್ರತಿಭಟನೆ ನಡೆಸಲಿದ್ದಾರೆ.

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ "ತೆರಿಗೆ ನೋಟಿಸ್" ಜಾರಿ ವಿರೋಧಿಸಿ ಸಣ್ಣ ವ್ಯಾಪಾರಿಗಳು ಜುಲೈ.25 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ನಗರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ರಾಜ್ಯಾದ್ಯಂತ ಲಕ್ಷಾಂತರ ಸಣ್ಣ ವ್ಯಾಪಾರ ಮಾಲೀಕರು ಮತ್ತು ಅವರ ಕುಟುಂಬಗಳು ಪ್ರತಿಭಟನೆ ನಡೆಸಲಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಕರ್ನಾಟಕ ರಾಜ್ಯ ಕಾರ್ಮಿಕರ ಮಂಡಳಿಯು, ಸಣ್ಣ ವ್ಯಾಪಾರಿಗಳಿಗೆ 2021 ರ ಹಿಂದಿನ 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳವರೆಗಿನ ತೆರಿಗೆ ನೋಟಿಸ್ ಗಳನ್ನು ನೀಡಿದ್ದಾರೆ. ಈ ನೋಟಿಸ್‌ಗಳನ್ನು ಯಾವುದೇ ಪೂರ್ವ ಮಾಹಿತಿ ಅಥವಾ ವಿವರಣೆಯಿಲ್ಲದೆ ನೀಡಲಾಗಿದೆ ಎಂದು ಆರೋಪಿಸಿದೆ.

ಈ ಪ್ರತಿಭಟನೆಯಲ್ಲಿ ಬೇಕರಿಗಳು, ತರಕಾರಿ ಮತ್ತು ಹಣ್ಣಿನ ಅಂಗಡಿಗಳು, ಹೂವಿನ ಅಂಗಡಿಗಳು, ಚಹಾ ಮಾರಾಟಗಾರರು ಮತ್ತು ಮಾಂಸದ ಅಂಗಡಿಗಳ ಮಾಲೀಕರು ಭಾಗವಹಿಸಲಿದ್ದಾರೆ.

ಪ್ರತಿಭಟನೆಗೂ ಮುನ್ನ, ಜುಲೈ 23 ಮತ್ತು 24 ರಂದು, ವ್ಯಾಪಾರಿಗಳು ವ್ಯವಹಾರಗಳನ್ನು ನಡೆಸುವಾಗ ಕಪ್ಪು ಪಟ್ಟಿಗಳನ್ನು ಧರಿಸಲಿದ್ದಾರೆ.

ಈ ಎರಡು ದಿನಗಳಲ್ಲಿ ಹಾಲು, ಚಹಾ, ಕಾಫಿ ಮತ್ತು ಹಾಲು ಆಧಾರಿತ ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಲು ಚಿಂತನೆ ನಡೆಸಲಾಗಿದೆಂದು ತಿಳಿಸಿದೆ.

ಇದೇ ವೇಳೆ ಜುಲೈ 25ರಂದು ನಡೆಸುತ್ತಿರುವ ಬಂದ್‌ನಲ್ಲಿ ಎಲ್ಲಾ ವ್ಯಾಪಾರಿಗಳು ಸ್ವಯಂಪ್ರೇರಣೆಯಿಂದ ಭಾಗವಹಿಸಲು ಮತ್ತು ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

Chikkaballapur: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್​​ ಸವಾರನಿಗೆ ಚಾಕು ಇರಿತ, ಪೊಲೀಸ್ ಠಾಣೆಯಲ್ಲೇ ಲೇಡಿ ಹೈಡ್ರಾಮಾ, Video

SCROLL FOR NEXT