ಬೆಂಗಳೂರು: ರೌಡಿಶೀಟರ್ ಶಿವ ಪ್ರಕಾಶ್ ಅಲಿಯಾಸ್ ಬಿಕ್ಲ ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಈ ಮೂಲಕ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿದೆ.
ಶಂಕಿತರನ್ನು ಅರುಣ್ ಅಲಿಯಾಸ್ ತೇಮು ಮತ್ತು ನವೀನ್ ಎಂದು ಗುರುತಿಸಲಾಗಿದ್ದು, ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನಂತರ ನಾವು 14 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತೊಬ್ಬ ಶಂಕಿತ ಆರ್‌ಡಿ ಅನಿಲ್ ಎಂಬಾತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ಅಪರಾಧ ಕೃತ್ಯದಲ್ಲಿ ಬಳಸಲಾದ ವಾಹನವನ್ನು ಅವನೇ ಒದಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜುಲೈ 19 ರಂದು ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಅವರನ್ನು ಮೂರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನ ನೀಡಿತ್ತು. ಜುಲೈ 23 ರಂದು ಅವರನ್ನು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಪೊಲೀಸರ ಪ್ರಕಾರ, ಜುಲೈ 15ರ ರಾತ್ರಿ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು (40) ಅವರನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು.
ಪ್ರಕರಣದಲ್ಲಿ ಈಗಾಗಲೇ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಫ್ರೆಡ್ರಿಕ್ ಎಂಬುವವರನ್ನು ಬಂಧಿಸಲಾಗಿದೆ.