ಸಾಂದರ್ಭಿಕ ಚಿತ್ರ online desk
ರಾಜ್ಯ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವೀಸಾ ಅವಧಿ ಮುಗಿದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 9 ವಿದೇಶಿಗರನ್ನು ಬಂಧಿಸಿದ್ದಾರೆ.

ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ವಾಸಗಿದ್ದರು. ಇನ್ನು ಬಂಧಿತರನ್ನು ಡಿಟೆನ್ಷನ್ ಸೆಂಟರ್​ ಗೆ ಕಳುಹಿಸಲಾಗಿದ್ದು, ಬಂಧಿತರನ್ನು ಅವರವರ ದೇಶಕ್ಕೆ ವಾಪಸ್ ಕಳಿಸುವ ಪ್ರಕ್ರಿಯೆ ನಡೆದಿದೆ.

ವಿದ್ಯಾಭ್ಯಾಸ ಹಾಗೂ ಇನ್ನಿತರ ಉದ್ದೇಶಕ್ಕಾಗಿ ಬೆಂಗಳೂರಿಗೆ ಬಂದು ವೀಸಾ ಅವಧಿ ಮುಗಿದರೂ ಇಲ್ಲೇ ನೆಲೆಸುತ್ತಿರುವ ವಿದೇಶಿಗರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದು ನಗರ ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಹೀಗಿದ್ದರೂ ಸಹ ಪೊಲೀಸರು ಆಗಾಗ ವಿದೇಶಿಗರ ಪತ್ತೆ ಕಾರ್ಯಚರಣೆ ನಡೆಸುತ್ತಲೇ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ.. ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆ

ದೀಪಾವಳಿ ಹಬ್ಬದಂದೆ ಘೋರ ಘಟನೆ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!

ಕಾಂಗ್ರೆಸ್-ಆರ್‌ಜೆಡಿಯಿಂದ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ

ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ, Congress ಕಾರ್ಯಕರ್ತರು!

ತಮ್ಮ ಪಕ್ಷದ ಡಿಸಿಎಂಗೆ ಮತ ಹಾಕಬೇಡಿ ಎಂದು ಬಿಹಾರಿಗಳಿಗೆ ಬಿಜೆಪಿ ನಾಯಕ ಮನವಿ!

SCROLL FOR NEXT