ಸಂಗ್ರಹ ಚಿತ್ರ 
ರಾಜ್ಯ

Independence Day in Bengaluru: 79ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಪ್ರಾರಂಭ

ಸ್ವಾತಂತ್ರ್ಯ ದಿನಾಚರಣೆ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನಡೆಯುವುದರಿಂದ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಬೆಂಗಳೂರು: ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 79 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ದತೆಗಳ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮಹೇಶ್ವರ್ ರಾವ್ ಅವರು, ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಆಯಾ ಇಲಾಖೆಗಳಿಗೆ ನೀಡಲಾದ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನಡೆಯುವುದರಿಂದ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆಸನಗಳ ವ್ಯವಸ್ಥೆ, ಯಾವ ದ್ವಾರಗಳ ಮೂಲಕ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್, ಮಾರ್ಗ ಬದಲಾವಣೆ ಮತ್ತು ಇತರ ವ್ಯವಸ್ಥೆಗಳಲ್ಲಿ ಯಾವುದೇ ಗೊಂದಲ ಇರಬಾರದು.

ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಡೆಗಟ್ಟಲು ಮತ್ತು ಭದ್ರತಾ ಕ್ರಮಗಳ ಕೈಗೊಳ್ಳಿ. ಪ್ರಥಮ ಚಿಕಿತ್ಸೆಗಾಗಿ ಆರೋಗ್ಯ ಇಲಾಖೆಯು ಆಂಬ್ಯುಲೆನ್ಸ್‌ಗಳು, ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆಗಳ ಕೈಗೊಳ್ಳಿ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ತಂಡವನ್ನು ಆಯ್ಕೆ ಮಾಡಬೇಕು. ಪ್ರವೇಶ ದ್ವಾರಗಳ ಬಳಿ ತಪಾಸಣೆ, ಸ್ಕ್ಯಾನಿಂಗ್ ವ್ಯವಸ್ಥೆ, ಪಾಸ್‌ಗಳ ಅಳವಡಿಕೆ ಮತ್ತು ಇತರವುಗಳಿಗಾಗಿ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ.

ಇದೇ ವೇಳೆ ಮಳೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಸಮಸ್ಯೆಗಳು ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳು, ತರಬೇತಿಗಾಗಿ ಬಂದಾಗ ಅಧಿಕಾರಿಗಳು ಅವರಿಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

ರಾಜ್ಯದಲ್ಲಿ ಒಪ್ಪಂದವಿಲ್ಲದೆ 'ಮನೆಗೆಲಸದವರ' ನೇಮಕ ಮಾಡಿಕೊಳ್ಳುವಂತಿಲ್ಲ: ಕರಡು ಮಸೂದೆಯಲ್ಲಿ ಏನಿದೆ?

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಬಂಧನ

ರಾಜ್ಯದಲ್ಲಿ ಇಳುವರಿ, ಗುಣಮಟ್ಟ ಕುಸಿತ: ಕರ್ನಾಟಕಕ್ಕೆ ಶ್ರೀಗಂಧದ ಎಣ್ಣೆ ರಫ್ತು ಮಾಡುತ್ತಿದೆ ಆಸ್ಟ್ರೇಲಿಯಾ!

Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್‌ಗೆ ESI

SCROLL FOR NEXT