ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತಿತರರು 
ರಾಜ್ಯ

ಬೆಂಗಳೂರು: ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಅಪಾರ ಶ್ರಮವಿದೆ ಎಂದರು.

ಬೆಂಗಳೂರು: ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಿಳಿಸಿದರು.

ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಅಪಾರ ಶ್ರಮವಿದೆ ಎಂದರು.

ಪವನ, ಸೌರ, ಉಷ್ಣ, ಜಲ ವಿದ್ಯುತ್ ಉತ್ಪಾದನೆ ಜೊತೆಗೆ ತ್ಯಾಜ್ಯದಿಂದಲೂ ವಿದ್ಯುತ್ ಉತ್ಪಾದನೆ ಮಾಡುತ್ತಾ ದೇಶದಲ್ಲೇ ಪ್ರಮುಖ ಸ್ಥಾನದಲ್ಲಿದ್ದು ಸ್ವಾವಲಂಬನೆ ಸಾಧಿಸಿದ್ದೀವಿ. 60 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಎಡೆಗೆ ನಾವು ಸಾಗುತ್ತಿದ್ದೇವೆ. ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎನ್ನುವ ವರದಿಗಳು ಬಂದಿವೆ. ಈ ಸಾಧನೆ ನಾವು ಮಾಡಿದ್ದೇವೆ ಎಂದು ಹೇಳಿದರು.

ನಾನು ಓದುವಾಗ ಊರಲ್ಲಿ ಕರೆಂಟ್ ಇರಲಿಲ್ಲ. ಸೀಮೆಎಣ್ಣೆ ದೀಪದಲ್ಲಿ ಓದಿ ಮೇಲೆ ಬಂದೆವು. 8ನೇ ತರಗತಿಗೆ ಬಂದಾಗ ಊರಿಗೆ ಕರೆಂಟ್ ಬಂತು. ಈಗ ವರ್ಷಕ್ಕೆ 20 ಸಾವಿರ ಕೋಟಿ ರೂ. ಪಂಪ್ ಸೆಟ್ ಸಬ್ಸಿಡಿ ಹಣವನ್ನು ರೈತರ ಪರವಾಗಿ ಸರ್ಕಾರ ಕೊಡುತ್ತಿದೆ. ಕೆಪಿಸಿಎಲ್ ನೌಕರರ ಶ್ರಮದಿಂದ ವಿದ್ಯುತ್ ರೈತರಿಗೆ ತಲುಪುತ್ತಿದೆ ಎಂದು ತಿಳಿಸಿದರು.

ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಕೆಪಿಸಿಎಲ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡದವರು ಉತ್ತಮವಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳ ಮೇಲೆ ಸಮಾಜದ ಋಣ ಇದೆ. ನಾವಾಗಲೀ, ಅಧಿಕಾರಿಗಳಾಗಲೀ ಸಮಾಜದ ಹಣದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಸಮಾಜದ ಋಣ ತೀರಿಸುವ ಕಾಳಜಿಯಿಂದ ಕೆಲಸ ಮಾಡಬೇಕಿದೆ ಎಂದು ಕಿವಿಮಾತು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video