ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಭಾರಿ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!

ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂಬ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC)ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 24 Jul 2025, 9:53 pm

ಮಂಗಳೂರು: ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂಬ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC)ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದೆ.

ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮತ್ತು ಅನಿವಾರ್ಯವಲ್ಲದ ಪ್ರಯಾಣವನ್ನು ತಡೆಯುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Advertisement

Advertisement

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜುಲೈ 25 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಬಿರು ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Also Read

Monsoon Rains: ಕರ್ನಾಟಕದಾದ್ಯಂತ ಭಾರಿ ಮಳೆ, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement