ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುತ್ತಿರುವ ‘ಅಭಿಮನ್ಯು’ 
ರಾಜ್ಯ

Mysuru Dasara 2025: ವಿಶ್ವವಿಖ್ಯಾತ ಜಂಬೂಸವಾರಿಗೆ ಸಿದ್ಧತೆ ಪ್ರಾರಂಭ; 6ನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

ಸತತ 5 ಬಾರಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯು ಆನೆ, ಈಗ 4ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ.

ಸತತ 6ನೇ ಬಾರಿಗೆ ಅಭಿಮನ್ಯು ಆನೆಯು ತಾಯಿ ಚಾಮುಂಡೇಶ್ವರಿ ವಿಗ್ರಹ ಇರುವ ಚಿನ್ನದ ಅಂಬಾರಿಯನ್ನು ಹೊರುತ್ತಿದ್ದು, ಸತತ 5 ಬಾರಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯು ಆನೆ ಈಗ 4ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ. ಈ ಬಾರಿ ಅಭಿಮನ್ಯು ಆನೆಯೊಂದಿಗೆ ಒಟ್ಟು 14 ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

ಈ ಬಾರಿಯ ದಸರಾ ಮಹೋತ್ಸವಕ್ಕೆ 14 ಆನೆಗಳು ಆಯ್ಕೆಯಾಗಿದ್ದು, ಈ ಪೈಕಿ ಮೊದಲ ತಂಡದಲ್ಲಿ ಆಗಮಿಸಲಿರುವ 9 ಆನೆಗಳ ಪಟ್ಟಿಯನ್ನು ಅರಣ್ಯ ಇಲಾಖೆ ಗುರುವಾರ ಬಿಡುಗಡೆ ಗೊಳಿಸಿದೆ. ಮೊದಲ ತಂಡದಲ್ಲಿ 7 ಗಂಡಾನೆ ಹಾಗೂ 2 ಹೆಣ್ಣಾನೆಗಳಿವೆ.

ಮತ್ತಿಗೋಡು ಶಿಬಿರದಲ್ಲಿರುವ ಅಭಿಮನ್ಯು (59 ವರ್ಷ), ಮತ್ತಿಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್‌ (24), ಧನಂಜಯ (44), ಪ್ರಶಾಂತ್‌ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40), ದುಬಾರೆ ಶಿಬಿರದ ಕಾವೇರಿ (45/ಹೆಣ್ಣಾನೆ), ಬಳ್ಳೆಯ ಲಕ್ಷ್ಮೀ (53/ಹೆಣ್ಣಾನೆ) ಆನೆಗಳು ಮೈಸೂರಿಗೆ ಆಗಮಿಸಲಿವೆ.

ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು ಈವರೆಗೆ 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತಿ ಪಡೆದಿದೆ. ಅಭಿಮನ್ಯು ಒಂಬತ್ತು ಅಡಿ ಎತ್ತರ ಮತ್ತು 4,920 ಕೆಜಿ ತೂಕವನ್ನು ಹೊಂದಿದ್ದಾನೆ, ತಲಾ 2.75 ಮೀಟರ್ ಗಾತ್ರದ ದಂತಗಳನ್ನು ಹೊಂದಿದ್ದಾನೆ.

ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳಿಗೆ ಆ.4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ನಡೆಯುವ ಗಜಪಯಣದಲ್ಲಿ ವಿಧ್ಯುಕ್ತ ಮತ್ತು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೊದಲ ಹತದಲ್ಲಿ ಅಂಬಾನೆ ಆನೆ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಆ.4 ರದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜಪಯಣ ಆರಂಭಿಸಲಿವೆ. ಗಜಪಯಣಕ್ಕೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚಾಲನೆ ದೊರೆಯಲಿದ್ದು, ನಂತರ ಆನೆಗಳನ್ನು ಮೈಸೂರಿಗೆ ಲಾರಿಗಳ ಮೂಲಕ ಕರೆತರಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

ಕೊನೆಗೂ ಪೊಲೀಸ್ ಬಲೆಗೆ ಬಿದ್ದ Piracy ಮಾಸ್ಟರ್ ಮೈಂಡ್, iBomma ಮಾಲೀಕ ರವಿ ಅರೆಸ್ಟ್! ಅಂದಿನ ವಾರ್ನಿಂಗ್ ಮುಳುವಾಯ್ತಾ?

INDI ಮೈತ್ರಿಕೂಟದಲ್ಲಿ ಭಾರಿ ಭಿನ್ನಮತ: ಸಾಕಪ್ಪಾ ಸಾಕು ಕಾಂಗ್ರೆಸ್, ರಾಹುಲ್ ಸಹವಾಸ; ಅಖಿಲೇಶ್ ನೇತೃತ್ವ ವಹಿಸಲಿ!: ಹೆಚ್ಚಾದ ಒತ್ತಡ

Delhi Blast: 'ವೈಟ್ ಕಾಲರ್' ಉಗ್ರ ಜಾಲ: ಹರಿಯಾಣದ ವೈದ್ಯೆ ಪ್ರಿಯಾಂಕಾ ಶರ್ಮಾ ವಿಚಾರಣೆ, ಯಾರು ಈಕೆ?

SCROLL FOR NEXT