ಮಡಿಕೇರಿ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು 
ರಾಜ್ಯ

ಮಡಿಕೇರಿ: ಟ್ರಕ್-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ ಸಂಭವಿಸಿದೆ.

ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು: ಶಾಪಿಂಗ್ ಮಾಡುತ್ತಿದ್ದ ಯುವತಿಯ ಎಳೆದು ಚುಂಬಿಸಿದ ಯುವಕ; ಬಂಧನ

ನಾಗವಾರದ ಮಾರುಕಟ್ಟೆ ಪ್ರದೇಶದಲ್ಲಿ ಶಾಪಿಂಗ್ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಜುಲೈ 11 ರಂದು ಸಂಜೆ 7.45 ರಿಂದ 8 ಗಂಟೆಯ ನಡುವೆ ಘಟನೆ ನಡೆದಿದೆ. ವಿದ್ಯಾರ್ಥಿನಿ ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುತ್ತಿದ್ದಾಗ ಯುವಕ ಎಳೆದು ಅಪ್ಪಿಕೊಂಡಿದ್ದು, ಲೈಂಗಿಕ ಕಿರುಕುಳ ನೀಡಿದ್ದಾನೆಂದು ತಿಳಿದುಬಂದಿದೆ.

ಈ ಸಂಬಂಧ ಯುವತಿಯ ತಾಯಿ ಮರುದಿನ ಗೋವಿಂದಪುರ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ಯುವಕನನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಯುವಕನನ್ನು ಗೋವಿಂದಪುರ ಮುಖ್ಯ ರಸ್ತೆಯ ನಿವಾಸಿ ಮೊಹಮ್ಮದ್ ಮಾರೂಫ್ ಶೆರಿಫ್ ಎಂದು ಗುರ್ತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!