ಬೆಂಗಳೂರು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಹೊತ್ತಿದ್ದ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.
ಶಾಲಿನಿ ರಜನೀಶ್ ದೂರು ನೀಡಿಲ್ಲ, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್‌ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ-ಪ್ರತಿವಾದ ಬಳಿಕ ಮಧ್ಯಂತರ ತಡೆ ನೀಡಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ರಾಜಕಾರಣಿಗಳು ಹೊಸ ಬಗೆಯ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಮೌಖಿಕವಾಗಿ ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.
ಇಂದಿನ ವಿಚಾರಣೆಯಲ್ಲಿ ಎಂಎಲ್‌ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಾಡಿದ್ದು, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ.