ಪೊಂಗಲ್ ನಲ್ಲಿ ಹುಳು ಪತ್ತೆ 
ರಾಜ್ಯ

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಕೇಸ್​​ಗೆ ಟ್ವಿಸ್ಟ್: 25 ಲಕ್ಷ ರೂ ಹಣಕ್ಕಾಗಿ ಬ್ಲಾಕ್​ಮೇಲ್; ಗ್ರಾಹಕನ ವಿರುದ್ಧ ದೂರು ದಾಖಲು

ಗುರುವಾರ (ಜುಲೈ 24) ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ಮಾರಾಟ ಮಳಿಗೆಯಲ್ಲಿ ತನಗೆ ಬಡಿಸಿದ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದರು.

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ತನ್ನ ಹೋಟೆಲ್​ನಲ್ಲಿ ಆಹಾರದಲ್ಲಿ ಹುಳು ಪತ್ತೆಯಾಗಿದೆ ಎಂಬ ಸುಳ್ಳು ಘಟನೆಯನ್ನು ಸೃಷ್ಟಿಸಿ, ಬ್ರ್ಯಾಂಡ್​ಗೆ ಮಸಿ ಬಳಿಯಲು ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಗ್ರಾಹಕನ ವಿರುದ್ಧ ದಕ್ಷಿಣ ಭಾರತದ ಜನಪ್ರಿಯ ರೆಸ್ಟೋರೆಂಟ್ ಬ್ರ್ಯಾಂಡ್ ರಾಮೇಶ್ವರ ಕೆಫೆ ಪೊಲೀಸ್ ದೂರು ದಾಖಲಿಸಿದೆ.

ಗುರುವಾರ (ಜುಲೈ 24) ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ಮಾರಾಟ ಮಳಿಗೆಯಲ್ಲಿ ತನಗೆ ಬಡಿಸಿದ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ತಮ್ಮ ಆಹಾರದಲ್ಲಿ ಹುಳು ಪತ್ತೆಯಾಗಿರುವ ವಿಡಿಯೋ ಸಹ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತಕ್ಷಣ ವೈರಲ್ ಆಗಿ, ರಾಮೇಶ್ವರಂ ಕೆಫೆ ವಿರುದ್ಧ ಟೀಕೆಗಳು ಕೇಳಿಬಂದವು.

ಆದರೆ ರಾಮೇಶ್ವರಂ ಕೆಫೆ ಈ ಆರೋಪವನ್ನು ಬಲವಾಗಿ ನಿರಾಕರಿಸಿದ್ದು ತಮ್ಮ ಬ್ರ್ಯಾಂಡ್ ಅನ್ನು ಬ್ಲ್ಯಾಕ್‌ಮೇಲ್ ಮಾಡಲು ಈ ಘಟನೆಯನ್ನು ರೂಪಿಸಲಾಗಿದೆ ಎಂದು ಹೇಳಿಕೊಂಡಿದೆ. ಐದರಿಂದ ಏಳು ಜನರ ಗುಂಪು ಗುರುವಾರ ಬೆಳಿಗ್ಗೆ ಔಟ್‌ಲೆಟ್‌ನಲ್ಲಿ ಗಲಾಟೆ ಮಾಡಿ ನಂತರ ವೀಡಿಯೊ ಪ್ರಸಾರವಾಗದಂತೆ ತಡೆಯಲು 25 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದೆ ಎಂದು ಕೆಫೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸಂಬಂಧ ರಾಮೇಶ್ವರಂ ಕೆಫೆ ಪೊಲೀಸ್ ದೂರು ದಾಖಲಿಸಿದ್ದು, ಕರೆ ದಾಖಲೆಗಳು, ಸ್ಕ್ರೀನ್‌ಶಾಟ್‌ಗಳು ಮತ್ತು ಇತರ ಪುರಾವೆಗಳನ್ನು ಸಲ್ಲಿಸಿದೆ.

ರಾಮೇಶ್ವರಂ ಕೆಫೆಯ ಸಂಸ್ಥಾಪಕಿ ದಿವ್ಯಾ ರಾಘವ್ ಈ ಆರೋಪಗಳನ್ನು "ಆಧಾರರಹಿತ" ಎಂದು ಕರೆದರು. ಈ ಹಿಂದೆಯೂ ಇದೇ ರೀತಿಯ ಬ್ಲ್ಯಾಕ್‌ಮೇಲ್ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ನವರಾತ್ರಿ ವೇಳೆ ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

SCROLL FOR NEXT