ಡಿಸಿಎಂ ಡಿಕೆ ಶಿವಕುಮಾರ್ online desk
ರಾಜ್ಯ

ಡಿಸಿಎಂ ಡಿಕೆ ಶಿವಕುಮಾರ್ ಕಚೇರಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬಾಂಬ್​ ಬೆದರಿಕೆ

ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ತಕ್ಷಣ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದರು.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ​ ಸಂದೇಶ ಬಂದಿದೆ.

ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ತಕ್ಷಣ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಬಾಂಬ್​ ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್​ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

bhagwanthmann@yandex.com ಮೇಲ್‌ನಿಂದ ಬಾಂಬ್​ ಬೆದರಿಕೆ ಸಂದೇಶ ಬಂದಿದ್ದು, ಟರ್ಮಿನಲ್ 1, 2ರಲ್ಲಿ ಬಾಂಬ್ ಇಟ್ಟಿದ್ದು ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್‌ಪೋರ್ಟ್‌ನಲ್ಲಿ ಬ್ಲಾಸ್ಟ್‌ ಆಗಲಿದೆ ಎಂದು ಮೇಲ್​ನಲ್ಲಿ ಬರೆಯಲಾಗಿತ್ತು.

ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ, 'Hormuz' ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ?: ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಗಡುವು ಮೀರಿ 5 ತಿಂಗಳಾದರೂ ಮುಕ್ತಾಯಗೊಳ್ಳದ ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನವೀಕರಣ ಕಾಮಗಾರಿ!

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

SCROLL FOR NEXT