ವೀರಗಲ್ಲು 
ರಾಜ್ಯ

Kargil Vijay Diwas: ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ 75 ಅಡಿ ಎತ್ತರದ ಏಕಶಿಲಾ ವೀರಗಲ್ಲು ಅನಾವರಣ

ಇಡೀ ದೇಶದಲ್ಲಿ ಹುತಾತ್ಮ ಯೋಧರಿಗೆ ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ಮಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ.

ಬೆಂಗಳೂರು: ಕಾರ್ಗಿಲ್ ವಿಜಯ ದಿನಾಚರಣೆ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿರುವ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸ್ಥಾಪಿಸಿರುವ 75 ಅಡಿ ಎತ್ತರದ ಏಕಶಿಲಾ ‘ವೀರಗಲ್ಲು’ ಸ್ತಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅನಾವರಣಗೊಳಿಸಿದರು.

ನಗರದ ಸೈನಿಕ ಮತ್ತು ಪುನರ್ವಸತಿ ಇಲಾಖೆ, ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್‍ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ದೇಶದ ಹೆಮ್ಮೆಯ ಸೈನಿಕರ ತ್ಯಾಗ-ಬಲಿದಾನದ ಸಂಕೇತವಾಗಿರುವ ಏಕಶಿಲಾ ‘ವೀರಗಲ್ಲು’ ಸ್ತಂಭವನ್ನು ಅನಾವರಣಗೊಳಿಸಿ ಹುತಾತ್ಮ ಯೋಧರಿಗೆ ಮುಖ್ಯಮಂತ್ರಿಗಳು ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಮಿಲಿಟರಿ ಅಧಿಕಾರಿಗಳು, ವೀರ ಯೋಧರು ಮತ್ತು ಹುತಾತ್ಮ ಯೋಧರ ಕುಟುಂಬಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿದ ಸೈನಿಕರಿಗೆ ಗೌರವ ಸಲ್ಲಿಸಿದರು ಮತ್ತು ರಾಷ್ಟ್ರದ ಗಡಿಗಳನ್ನು ರಕ್ಷಿಸುವಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸಿದರು.

ರಾಷ್ಟ್ರೀಯ ಮಿಲಿಟರಿ ಸ್ಮಾರಕದ ಹಿಂದಿನ ದಾರ್ಶನಿಕ ಏರ್ ಕಮಾಂಡರ್ ಚಂದ್ರಶೇಖರ್ (ನಿವೃತ್ತ) ಅವರನ್ನು ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಹುತಾತ್ಮ ಯೋಧರಿಗೆ ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ಮಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ. ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮತ್ತು ಗೌರವ ಸಲ್ಲಿಸಲು ನಿರ್ಮಾಣವಾಗಿರುವ 75 ಅಡಿ ಎತ್ತರ ಸುಮಾರು 400 ಟನ್ ತೂಕವುಳ್ಳ ಏಕಶಿಲ ‘ವೀರಗಲ್ಲು’ ಸ್ತಂಭ ಭಾರತೀಯ ಸೇನೆಯ ವೀರರಂತೆಯೇ ಅಚಲ, ಧೃಡ, ಅಮರ ಮತ್ತು ಎಲ್ಲ ನೈಸರ್ಗಿಕ ತಾಪಗಳನ್ನು ತಡೆದುಕೊಳ್ಳಬಲ್ಲಷ್ಟು ಶಕ್ತಿಶಾಲಿ ಆಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಫ್ಲೈಟ್ ಲೆಫ್ಟಿನೆಂಟ್ ಲೋಲಾಕ್ಷ ಮಾಡಾಳು ಶ್ರೀನಿವಾಸ, ಗೃಹ ಸಚಿವ ಜಿ. ಪರಮೇಶ್ವರ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ