ಕಾಂಗ್ರೆಸ್ ಮುಖಂಡ ನಂಜೇಶ್ 
ರಾಜ್ಯ

ಬೆಂಗಳೂರು ದಕ್ಷಿಣ: ಮಾರಕಾಸ್ತ್ರಗಳಿಂದ ಕೊಚ್ಚಿ Congress ಮುಖಂಡನ ಬರ್ಬರ ಹತ್ಯೆ

ಬೆಂಗಳೂರು ದಕ್ಷಿಣ (Ramanagara) ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ (Congress) ಮುಖಂಡನೋರ್ವನ ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರು: ಬೆಂಗಳೂರು ದಕ್ಷಿಣ (Ramanagara) ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ (Congress) ಮುಖಂಡನೋರ್ವನ ಬರ್ಬರ ಹತ್ಯೆ ಮಾಡಲಾಗಿದೆ. ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ 45 ವರ್ಷದ ಅಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಎಂಬಾತನ ಮೇಲೆ ಗುಂಪೊಂದು ದಾಳಿ ಮಾಡಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ತನ್ನ ಗ್ರಾಮದಲ್ಲಿನ ಜಮೀನಿನ ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ಸ್ಥಳೀಯರೊಂದಿಗೆ ನಂಜೇಶ್ ಜಗಳವಾಡಿದ್ದರು. ಇದರ ಬೆನ್ನಲ್ಲೇ ಅವರನ್ನು ಕೊಲೆ ಮಾಡಲಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ. ಮಾರಣಾಂತಕವಾಗಿ ಗಾಯಗೊಂಡಿದ್ದ ನಂಜೇಶ್ ಅವರನ್ನು ತಕ್ಷಣವೇ ಕನಕಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್