ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಡ್ರಗ್ಸ್ ತಯಾರಿಸುವ ಫ್ಯಾಕ್ಟರಿ ಪತ್ತೆ; ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ ಪತ್ತೆಯಾಗಿದ್ದು, ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು, ಹೊರವಲಯದ ರಿಂಗ್ ರಸ್ತೆ ಬಳಿ ಇರುವ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕೋಟ್ಯಂತರ ರೂ. ಮೌಲ್ಯದ ಎಂಡಿಎಂಎ ಹಾಗೂ ಅದರ ತಯಾರಿಕೆಗೆ ಬಳಕೆ ಮಾಡಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಮೈಸೂರಿನಲ್ಲಿ ಪತ್ತೆಯಾದ ಮಾದಕ ವಸ್ತುವಿಗೆ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ .ಮೈಸೂರಿನಿಂದ ಡ್ರಗ್ ಸಪ್ಲೈ ಆಗುತ್ತಿರುವ ಬಗ್ಗೆ ಪೆಡ್ಲರ್ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಮಹಾರಾಷ್ಟ್ರ ಪೊಲೀಸರು ಇಂದು ಮೈಸೂರು ಪೊಲೀಸರ ಸಹಯೋಗದಲ್ಲಿ ದಾಳಿ ನಡೆಸಿದ್ದಾರೆ.

ಮೈಸೂರಿನಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿರುವುದು ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ.

ಮಹಾರಾಷ್ಟ್ರದಲ್ಲಿ ಬಂಧಿತ ಡ್ರಗ್‌ ಪೆಡ್ಲರ್‌ ಒಬ್ಬ ತಮಗೆ ಮೈಸೂರಿನಿಂದ ಎಂಡಿಎಂಎ ಸರಬರಾಜು ಆಗುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ. ಅದನ್ನು ಆಧರಿಸಿ ಮೈಸೂರಿಗೆ ಆಗಮಿಸಿದ ಮಹಾರಾಷ್ಟ್ರ ಪೊಲೀಸರು ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿದಾಗ ಡ್ರಗ್ಸ್ ತಯಾರಿಕಾ ಅಡ್ಡೆ ಪತ್ತೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್