ಆರ್. ಅಶೋಕ್  
ರಾಜ್ಯ

'ಗ್ಯಾರಂಟಿ' ಗಳಿಗಾಗಿ ಪರಿಶಿಷ್ಟರ 11.8 ಸಾವಿರ ಕೋಟಿ ರೂ ಅನುದಾನ ದೋಚಲು ಕಾಂಗ್ರೆಸ್ ಮುಂದು: ಅಶೋಕ್

ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ.

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.

ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ವಾಗ್ದಾಳಿ ನಡೆಸಿದ್ದಾರೆ.

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಟಿಎಸ್‌ಪಿ (ಬುಡಕಟ್ಟು ಉಪಯೋಜನೆ) ಅಡಿ ಪರಿಶಿಷ್ಟರ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ (2025-26) ಒದಗಿಸಿದ ಒಟ್ಟು 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ.ಯನ್ನು ಪಂಚ `ಗ್ಯಾರಂಟಿ’ ಯೋಜನೆಗಳ ಅನುಷ್ಠಾನಕ್ಕೆ ಹಂಚಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

SCROLL FOR NEXT