ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣ (ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು ಕಾಲ್ತುಳಿತ: ಬಿ. ದಯಾನಂದ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್

ಆದಾಗ್ಯೂ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಕಾಶ್ ಕುಮಾರ್ ವಿಕಾಶ್ ಅವರ ಅಮಾನತು ಜಾರಿಯಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಂಗಳೂರು: RCB ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಆಗಿನ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಸೋಮವಾರ ಹಿಂಪಡೆದಿದೆ.

ಆದಾಗ್ಯೂ, ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಯುತ್ತಿರುವುದರಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಕಾಶ್ ಕುಮಾರ್ ವಿಕಾಶ್ ಅವರ ಅಮಾನತು ಜಾರಿಯಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸರ್ಕಾರಿ ಆದೇಶದ ಪ್ರಕಾರ, ನ್ಯಾಯಾಂಗ ಆಯೋಗ ಮತ್ತು ಮ್ಯಾಜಿಸ್ಟೀರಿಯಲ್ ಸಮಿತಿ ಎರಡೂ ಕಾಲ್ತುಳಿತ ಘಟನೆಯ ತನಿಖೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವುದರಿಂದ ಮತ್ತು ಅಧಿಕಾರಿಗಳು ತಮ್ಮ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿರುವುದರಿಂದ ಅಮಾನತು ರದ್ದುಗೊಳಿಸಲಾಗಿದೆ.

ಬಿ. ದಯಾನಂದ, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್. ತೆಕ್ಕಣ್ಣವರ, ಎಸಿಪಿ ಸಿ ಬಾಲಕೃಷ್ಣ, ಮತ್ತು ಇನ್ಸ್‌ಪೆಕ್ಟರ್ ಎ ಕೆ ಗಿರೀಶ್ ಅವರ ಅಮಾನತು ಹಿಂಪಡೆಯಲಾಗಿದೆ.

ಜುಲೈ 1 ರಂದು, ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಬೆಂಗಳೂರು ಪೀಠವು ವಿಕಾಶ್ ಅವರ ಅಮಾನತು ರದ್ದುಗೊಳಿಸಿದೆ. ಆದರೆ ರಾಜ್ಯ ಸರ್ಕಾರ ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಹೀಗಾಗಿ ಅವರ ಅಮಾನತು ಜಾರಿಯಲ್ಲಿದೆ.

ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಮತ್ತು 56 ಜನ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT