ತುಂಗಾಭದ್ರಾ ಜಲಾಶಯ( ಸಂಗ್ರಹ ಚಿತ್ರ) 
ರಾಜ್ಯ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ ನದಿ: ತಗ್ಗು ಪ್ರದೇಶ‌ಗಳ ನಿವಾಸಿಗಳಿಗೆ ಎಚ್ಚರಿಕೆ

ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ದಾವಣಗೆರೆ: ಭಾರೀ ಮಳೆಯ ಪರಿಣಾಮ ಅಪಾಯದ ಮಟ್ಟ ಮೀರಿ ತುಂಗಾಭದ್ರಾ ನದಿ ಹರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶ‌ಗಳ ಜನರು ಎಚ್ಚರಿಕೆ ವಹಿಸುವಂತೆ​ ಸೂಚನೆ ನೀಡಲಾಗಿದೆ.

ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು‌, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ, ಡ್ಯಾಂಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ಸ್ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಜನರು ನದಿಪಾತ್ರದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜಾನುವಾರುಗಳು ಸೇರಿದಂತೆ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಿದ್ದಾರೆ.

ತುಂಗಾ ಜಲಾಶಯದಿಂದ 68,599 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದು, ಭದ್ರಾ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಪರಿಣಾಮ 39017 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿರುತ್ತದೆ. ಪ್ರಸ್ತುತ ತುಂಗಭದ್ರಾ ನದಿಯಲ್ಲಿ ಅಪಾಯ ಮಟ್ಟ ಮೀರಿ 1,12,170 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲ್ಲೂಕುಗಳ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ.

ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‍ಘಾಟ್ ಪ್ರದೇಶದ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಹರಿಹರ ಪಟ್ಟಣದ ಗಂಗಾನಗರ ಬಳಿ ಎಪಿಎಂಸಿ ಭವನದಲ್ಲಿ ಹಾಗೂ ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಜನ ಹಾಗೂ ಜಾನುವಾರುಗಳು ನದಿಗೆ ಇಳಿಯದಂತೆ ತಿಳಿಸಿದೆ ಹಾಗೂ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳವುದನ್ನು ನಿಷೇದಿಸಿದೆ ಎಂದು ತಿಳಿಸಿದ್ದಾರೆ.

ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಈ ಕೆಳಕಂಡ ಸಹಾಯವಾಣಿಗಳನ್ನು ತೆರೆಯಲಾಗಿದೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯ, ದಾವಣಗೆರೆ 08192-234034 ಅಥವಾ 1077 ಎಸ್‍ಡಿಆರ್‍ಎಫ್ ಘಟಕ ದೇವರಬೆಳೆಕೆರೆ 7411308591, ಆಗ್ನಿಶಾಮಕ ಇಲಾಖೆ ದಾವಣಗೆರೆ 08192-258101 ಅಥವಾ 112, ಮಹಾನಗರ ಪಾಲಿಕೆ ದಾವಣಗೆರೆ 08192-234444 ಹಾಗೂ 8277234444 (ವಾಟ್ಸ್ಆಪ್) ಸ್ಮಾರ್ಟ್ ಸಿಟಿ, ದಾವಣಗೆರೆ, 18004256020, ತಾಲ್ಲೂಕು ಕಛೇರಿ, ದಾವಣಗೆರೆ 9036396101, ತಾಲ್ಲೂಕು ಕಛೇರಿ, ಹರಿಹರ 08192-272959, ತಾಲ್ಲೂಕು ಕಛೇರಿ, ಜಗಳೂರು 08196-227242, ತಾಲ್ಲೂಕು ಕಛೇರಿ, ಹೊನ್ನಾಳಿ 08188-252108, ತಾಲ್ಲೂಕು ಕಛೇರಿ, ನ್ಯಾಮತಿ 8073951245, ತಾಲ್ಲೂಕು ಕಛೇರಿ, ಚನ್ನಗಿರಿ 08188-295518 ಇಲ್ಲಿ ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.‌

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT