ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಸೋಮವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶೇಖರಗೌಡ ಹಾಗೂ ಜಿ. ಬಸವರಾಜ್ ಎಂದು ಗುರುತಿಸಲಾಗಿದ್ದು, ಕಾರಿನ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ .
ಬಳ್ಳಾರಿಯಿಂದ ಸಿಂಧನೂರು ಕಡೆ ಹೊರಟಿದ್ದ ಮಾರುತಿ ಫ್ರಾಂಕ್ಸ್ ಕಾರು ಹಾಗೂ ಬಳ್ಳಾರಿ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಸ್ಥಳಕ್ಕೆ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬಳ್ಳಾರಿ ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.