ಸಂಗ್ರಹ ಚಿತ್ರ 
ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಚುನಾವಣಾ ಕರ್ತವ್ಯದಿಂದ ಮುಕ್ತಿ

ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವೆ ಹೇಳಿದರು.

ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್