ದಕ್ಷಿಣ ವಲಯದ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿರುವ ಡೈರಿ ವೃತ್ತದಲ್ಲಿ ರಸ್ತೆ ಪರಿಶೀಲನೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್. 
ರಾಜ್ಯ

ಬನ್ನೇರುಘಟ್ಟ ರಸ್ತೆಗೆ ಮಾದರಿ ಪಾದಚಾರಿ ಮಾರ್ಗದ ಅಗತ್ಯವಿದೆ: BBMP ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಮೆಟ್ರೋ ಪಿಂಕ್ ಲೈನ್ ಬರುತ್ತಿದೆ. ಈ ಮಾರ್ಗದಲ್ಲಿರುವ ಪಾದಚಾರಿ ಮಾರ್ಗಗಳನ್ನು ಅದೇ ಮಾದರಿಯಲ್ಲಿ ನಿರ್ಮಿಸಿ ಮಾದರಿ ಪಾದಚಾರಿ ಮಾರ್ಗವನ್ನಾಗಿ ಮಾಡಬೇಕು.

ಬೆಂಗಳೂರು: ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಮಾದರಿ ಪಾದಚಾರಿ ಮಾರ್ಗ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಮಂಗಳವಾರ ದಕ್ಷಿಣ ವಲಯದ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿರುವ ಡೈರಿ ವೃತ್ತದಲ್ಲಿ ಪಾದಚಾರಿ ಮಾರ್ಗ, ರಸ್ತೆ ಗುಂಡಿಗಳು, ಸ್ವಚ್ಛತೆ ಮತ್ತು ಇತರ ಸಮಸ್ಯೆಗಳನ್ನೂ ಪರಿಶೀಲಿಸಿದರು.

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಮೆಟ್ರೋ ಪಿಂಕ್ ಲೈನ್ ಬರುತ್ತಿದೆ. ಈ ಮಾರ್ಗದಲ್ಲಿರುವ ಪಾದಚಾರಿ ಮಾರ್ಗಗಳನ್ನು ಅದೇ ಮಾದರಿಯಲ್ಲಿ ನಿರ್ಮಿಸಿ ಮಾದರಿ ಪಾದಚಾರಿ ಮಾರ್ಗವನ್ನಾಗಿ ಮಾಡಬೇಕು. ಪಾದಚಾರಿ ಮಾರ್ಗಗಳ ಎತ್ತರವನ್ನು ಏಕರೂಪಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾದಚಾರಿ ಮಾರ್ಗಗಳ ಸರಿಯಾದ ನಿರ್ಮಾಣವು ಸಾರ್ವಜನಿಕ ಸಾರಿಗೆ ಬಳಸುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ, ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣಗಳನ್ನು ತೆರವುಗೊಳಿಸಿ. ಮುಖ್ಯ ರಸ್ತೆಯಲ್ಲಿ ಯಾವುದೇ ಬಸ್ ಶೆಲ್ಟರ್‌ಗಳಿಲ್ಲದಿರುವುದು ಕಂಡು ಬಂದಿದ್ದು, ಅವುಗಳ ನಿರ್ಮಿಸಲು ಮತ್ತು ರಸ್ತೆ ಅಗಲವಿರುವ ಸ್ಥಳಗಳಲ್ಲಿ ಬಸ್ ನಿಲ್ದಾಣಗಳನ್ನು ಸ್ಥಾಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ರಸ್ತೆಗಳಲ್ಲಿ ಕಸ ಸುರಿಯುವುದರ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ನಿಯಮ ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

SCROLL FOR NEXT