ಬೆಂಗಳೂರು: ಇಂಧನ ಸಚಿವ ಕೆ.ಜೆ ಜಾರ್ಜ್ (KJ George) ಅವರ ಆಪ್ತರ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ (Income tax) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿತೇಂದ್ರ ವಿರ್ವಾನಿ ಒಡೆತನದ ಎಂಬೆಸಿ ಗ್ರೂಪ್ ಮತ್ತು ಕೊತಾರಿ ಎಂಬುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.