ಮಣ್ಣು ತಿಂದು ರೈತ ಆಕ್ರೋಶ. 
ರಾಜ್ಯ

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..!

ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು.

ಕೊಪ್ಪಳ: ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಎಲ್ಲಿಯೂ ರಸಗೊಬ್ಬರ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಮಣ್ಣು ತಿಂದು ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ಹಲವು ಗಂಟೆಗಳ ಕಾಲ ನಿಂತರೂ ಗೊಬ್ಬರ ಸಿಗದ ಕಾರಣ ಬರಿಗೈಯಲ್ಲಿ ವಾಪಸ್ಸಾಗಬೇಕಾಯಿತು.

ಇದರಿಂದ ಸಿಟ್ಟಿಗೆದ್ದ ರೈತರು ಮಣ್ಣು ತಿಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತ ಚಂದ್ರಪ್ಪ ಮಣ್ಣು ತಿಂದು ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸರ್ಕಾರದ ವಿರುದ್ಧ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ.

ಹೊಲಗಳಿಗೆ ರಸಗೊಬ್ಬರ ಹಾಕಲು ಇದು ಸೂಕ್ತ ಸಮಯವಾಗಿದೆ. ಆದರೆ, ಸರ್ಕಾರ ನೀಡುತ್ತಿಲ್ಲ. ಸೂಕ್ತ ಸಮಯಕ್ಕೆ ರಸಗೊಬ್ಬರ ಸಿಗದಿದ್ದರೆ ನಾವು ಮಣ್ಣು ತಿನ್ನಬೇಕಾಗುತ್ತದೆ. ಸರ್ಕಾರ ನಮಗೆ ರಸಗೊಬ್ಬರ ಒದಗಿಸಬೇಕೆಂದು ರೈತ ಚಂದ್ರಪ್ಪ ಅವರು ಹೇಳಿದ್ದಾರೆ,

ಕೊಪ್ಪಳ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ರೈತರು ಯೂರಿಯಾವನ್ನು ಮಿತವಾಗಿ ಬಳಸಬೇಕು. ನಮ್ಮಲ್ಲಿ ಸಂಗ್ರಹ ಮಿತವಾಗಿದ್ದು, ರೈತರು ಯೂರಿಯಾ ಬದಲಿಗೆ ನೈಸರ್ಗಿಕ ಗೊಬ್ಬರಗಳನ್ನು ಬಳಸುವುದನ್ನು ಪ್ರಾರಂಭಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT