ಪ್ರಜ್ವಲ್ ರೇವಣ್ಣ 
ರಾಜ್ಯ

ಅತ್ಯಾಚಾರ ಪ್ರಕರಣ: ತೀರ್ಪು ಮುಂದೂಡಿಕೆ; ಆಗಸ್ಟ್ 1ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

ಇಂದು ತೀರ್ಪು ಪ್ರಕಟಿಸುವ ಮುನ್ನ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಎರಡೂ ಕಡೆಯ ವಕೀಲರಿಂದ ಕೆಲವು ಸ್ಪಷ್ಟೀಕರಣ ಕೇಳಿದರು.

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ತೀರ್ಪನ್ನು ಬುಧವಾರ ವಿಶೇಷ ನ್ಯಾಯಾಲಯ ಆಗಸ್ಟ್ 1ಕ್ಕೆ ಮುಂದೂಡಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದರು.

ಇಂದು ತೀರ್ಪು ಪ್ರಕಟಿಸುವ ಮುನ್ನ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಎರಡೂ ಕಡೆಯ ವಕೀಲರಿಂದ ಕೆಲವು ಸ್ಪಷ್ಟೀಕರಣ ಕೇಳಿದರು. ಗೂಗಲ್ ಮ್ಯಾಪ್​​ ಅನ್ನು ಸಾಕ್ಷಿಯಾಗಿ ಪರಿಗಣಿಸಿಸಬಹುದೇ? ಸ್ಯಾಮ್​ಸಂಗ್ ಜೆ 4 ಮೊಬೈಲ್ ಸೀಜ್ ಮಾಡಿರುವ ಬಗ್ಗೆಯೂ ಮಾಹಿತಿ ಕೇಳಿ ತೀರ್ಪು ಮುಂದೂಡಿದರು.

ಸ್ಪಷ್ಟೀಕರಣ ಅಗತ್ಯವಿರುವುದರಿಂದ ಇಂದು ತೀರ್ಪು ಪ್ರಕಟಿಸಲು ಸಾಧ್ಯವಿಲ್ಲ. ಆಗಸ್ಟ್ 1ಕ್ಕೆ ಆದೇಶ ಪ್ರಕಟಿಸವುದಾಗಿ ನ್ಯಾಯಾಧೀಶರು ಹೇಳಿದರು.

ಪ್ರಜ್ವಲ್ ರೇವಣ್ಣ ಅವರ ತೋಟದ ಮನೆಯಲ್ಲಿ 47 ವರ್ಷದ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವಿದೆ. ಈ ಸಂಬಂಧ ಸಂತ್ರಸ್ತೆ ಏಪ್ರಿಲ್ 28, 2024 ರಂದು ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶುಕ್ರವಾರ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್​, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video