German Influencer ಯೂನೆಸ್ ಜರೋ ವಶಕ್ಕೆ ಪಡೆದ ಪೊಲೀಸರು. 
ರಾಜ್ಯ

ಚರ್ಚ್ ಸ್ಟ್ರೀಟ್ ನಲ್ಲಿ ವೀಡಿಯೋ ಶೂಟ್: 'German Influencer' ಯೂನೆಸ್ ಜರೋ ವಶಕ್ಕೆ

ಇನ್‌ಸ್ಟಾಗ್ರಾಮ್‌ನಲ್ಲಿ 11.2 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಯೂನೆಸ್ ಜರೋ ಯಾವುದೇ ಅನುಮತಿ ಪಡೆಯದೆ ಬೀದಿ ಪ್ರದರ್ಶನ ನೀಡಿದ್ದಕ್ಕಾಗಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಜನನಿಬಿಡ ಪ್ರದೇಶವಾಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ವಿಡಿಯೋ ಶೂಟ್ ಮಾಡಿ, ವಾಹನ ಸವಾರರಿಗೆ ಕಿರಿಕಿರಿಯುಂಟು ಮಾಡಿದ German Influencer ಯೂನೆಸ್ ಜರೋ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡರು.

ಇನ್‌ಸ್ಟಾಗ್ರಾಮ್‌ನಲ್ಲಿ 11.2 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಯೂನೆಸ್ ಜರೋ ಯಾವುದೇ ಅನುಮತಿ ಪಡೆಯದೆ ಬೀದಿ ಪ್ರದರ್ಶನ ನೀಡಿದ್ದಕ್ಕಾಗಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಯೂನೆಸ್ ಜರೋ ಅವರ ಪ್ರದರ್ಶನವು ಚರ್ಚ್ ಸ್ಟ್ರೀಟ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟುಮಾಡಿತು. ಕೆಲವು ವಾಹನ ಚಾಲಕರು ಸಾರ್ವಜನಿಕ ಕಿರಿಕಿರಿಯ ಬಗ್ಗೆ ನಮ್ಮ 112 ಗೆ ಮಾಹಿತಿ ನೀಡಿದರು. ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಯೂನೆಸ್ ಜರೋ ಅವರನ್ನು ಠಾಣೆಗೆ ಕರೆದೊಯ್ದಿತು.

ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಇದೇ ಮೊದಲು. ಅವರು ನನ್ನನ್ನು ಜೈಲಿಗೆ ಕಳುಹಿಸುತ್ತಾರೆ ಎಂದು ಹೆದರಿದ್ದೆ. ಆದರೆ, ಅದೃಷ್ಟ ಚೆನ್ನಾಗಿತ್ತು. ನಾನು ಸುರಕ್ಷಿತವಾಗಿದ್ದೇನೆ. ನಾನು ಭಾರತವನ್ನು ಪ್ರೀತಿಸುತ್ತೇನೆ" ಎಂದು ಯೂನೆಸ್ ಜರೋ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP