ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: BMTC ಬಸ್ ನಲ್ಲಿ ಮೊಬೈಲ್ ದೋಚುತ್ತಿದ್ದ ಆರು ಖದೀಮರ ಬಂಧನ

ಆರೋಪಿಗಳನ್ನು ಆಂಧ್ರ ಪ್ರದೇಶದ ನಾಗನೂರಿ ಕುಮಾರ್ (20), ಸಾಗರ್ ಸಣ್ಣಕ್ಕಿ (32), ಶಿವಕುಮಾರ್ (30), ಗುಡ್ಡು ಸಾಬ್ (36), ಹಾಲಪ್ಪ (29) ಮತ್ತು ಶಿವಶಂಕರ್ (20) ಎಂದು ಗುರುತಿಸಲಾಗಿದೆ.

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರು ಖದೀಮರ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹25 ಲಕ್ಷ ಮೌಲ್ಯದ 70 ಮೊಬೈಲ್ ಫೋನ್‌ಗಳು, ಕಾರು ಮತ್ತು ಬೈಕ್ ವೊಂದನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಆಂಧ್ರ ಪ್ರದೇಶದ ನಾಗನೂರಿ ಕುಮಾರ್ (20), ಸಾಗರ್ ಸಣ್ಣಕ್ಕಿ (32), ಶಿವಕುಮಾರ್ (30), ಗುಡ್ಡು ಸಾಬ್ (36), ಹಾಲಪ್ಪ (29) ಮತ್ತು ಶಿವಶಂಕರ್ (20) ಎಂದು ಗುರುತಿಸಲಾಗಿದೆ.

ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತುತ್ತಿದ್ದ ಈ ಗ್ಯಾಂಗ್, ಬಸ್ ಹತ್ತುವ ಸಮಯದಲ್ಲಿ ತಳ್ಳಾಡಿಕೊಂಡು ಪ್ರಯಾಣಿಕರ ಜೇಬಿನಲ್ಲಿದ್ದ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದರು.

ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿಯ ಪ್ರಗತಿನಗರದ ನಿವಾಸಿಯೊಬ್ಬರು ನೀಡಿದ ದೂರನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಮೊಬೈಲ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ.

ಈ ಗ್ಯಾಂಗ್ ಕದ್ದ ಮೊಬೈಲ್ ಗಳನ್ನು ಆಂಧ್ರ ಪ್ರದೇಶ ಹಾಗೂ ಬೆಂಗಳೂರಿನ ಕೆಲವು ಕಡೆ ಕಡಿಮೆ ಬೆಲೆಗೆ ಮಾರಾಟ ಮಾಡಿದ್ದರು. ಇನ್ನೂ ಕೆಲವು ಮೊಬೈಲ್ ಗಳ ಬಿಡಿ ಭಾಗಗಳನ್ನು ಬೇರ್ಪಡಿಸಿ ಮಾರಾಟ ಮಾಡಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

SCROLL FOR NEXT