ಸಿಎಂ ಸಿದ್ದರಾಮಯ್ಯ 
ರಾಜ್ಯ

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

ಯಾರಾದರೂ ದ್ವೇಷ ಭಾಷಣ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ.

ಬೆಂಗಳೂರು: ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿಗಳು) ಮತ್ತು ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಎರಡು ದಿನಗಳ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ದ್ವೇಷ ಭಾಷಣ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದರು.

ದ್ವೇಷ ಭಾಷಣ ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಯ ಕ್ರಮ ಕೈಗೊಳ್ಳಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು.

ಕಾನೂನು-ಸುವ್ಯವಸ್ಥೆ ಮತ್ತು ಅಭಿವೃದ್ಧಿಯ ನಡುವೆ ನೇರ ಸಂಬಂಧವಿದೆ. ರಾಜ್ಯಾದ್ಯಂತ ಅವುಗಳನ್ನು ಖಚಿತಪಡಿಸಿಕೊಳ್ಳಬೇಕು. ಸಂವಿಧಾನದ ಉದ್ದೇಶಗಳನ್ನು ಅಡ್ಡಿಪಡಿಸುವ ಶಕ್ತಿಗಳನ್ನು ಮೊಳಕೆಯಲ್ಲೇ ಕಿತ್ತುಹಾಕುವಂತೆ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆಂದು ಹೇಳಿದರು.

ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ, ಕಾನೂನು ಸಚಿವ ಎಚ್‌ಕೆ ಪಾಟೀಲ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಈ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಮತ್ತು ಕಾನೂನು ರಚನೆಯ ಅಗತ್ಯವಿದ್ದರೆ ಅದರ ಬಗ್ಗೆ ಚರ್ಚಿಸುತ್ತಿದ್ದಾರೆ. ಚರ್ಚೆಯ ನಂತರ ಅವರು ಸೂಚಿಸುವ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಯುವಕರು ಕ್ರಿಕೆಟ್ ಬೆಟ್ಟಿಂಗ್‌ಗೆ ಬಲಿಯಾಗುತ್ತಿದ್ದಾರೆ. ಜಿಲ್ಲೆಗಳಲ್ಲಿ ಜೂಜಾಟ, ಮಟ್ಕಾದಂತಹ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು, ಈ ಪಿಡುಗನ್ನು ಯಾವುದೇ ಒತ್ತಡಕ್ಕೆ ಮಣಿಯದೆ ನಿರ್ದಯವಾಗಿ ನಿಗ್ರಹಿಸಬೇಕು. ಅಲ್ಲದೆ, ಮೈಕ್ರೋಫೈನಾನ್ಸ್ ಸಂಸ್ಥೆಗಳಿಂದ (MFI) ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ಜಾರಿಗೆ ತರಲಾದ ಕಾನೂನನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷ (2024-25) ರಾಜ್ಯದಲ್ಲಿ ಸುಮಾರು 700 ಬಾಲ್ಯ ವಿವಾಹಗಳು ನಡೆದಿವೆ, ಯಾವುದೇ ಪರಿಸ್ಥಿತಿ ಎದುರಾದರೂ ಬಾಲ್ಯ ವಿವಾಹಗಳು ನಡೆಯದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ. ಬಾಲ್ಯ ವಿವಾಹದ ವಿರುದ್ಧ ಕಾನೂನುಗಳಿವೆ. ಅವುಗಳನ್ನು ತಡೆಯುವುದು ಒಂದು ಭಾಗ. ಯಾವುದೇ ಪರಿಸ್ಥಿತಿಯಲ್ಲಿಯೂ ಅವು ಸಂಭವಿಸದಂತೆ ನೋಡಿಕೊಳ್ಳಬೇಕು. ಬಾಲ್ಯ ಗರ್ಭಧಾರಣೆಯ ಪ್ರಕರಣಗಳನ್ನು ಸಹ ತಡೆಯಬೇಕು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅವುಗಳನ್ನು ನಿಲ್ಲಿಸುವುದನ್ನು ಖಚಿತಪಡಿಸಿಕೊಳ್ಳಲು ತಳಮಟ್ಟದ ಅಧಿಕಾರಿಗಳನ್ನು ಬಳಸಬೇಕು ಎಂದು ತಿಳಿಸಿದರು.

ಇದಲ್ಲದೆ, ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ಮತ್ತು ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಅಹಂ ಬಿಟ್ಟು ಕೆಲಸ ಮಾಡಿ

ಇನ್ನು ಸಭೆ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನೂ ನೀಡಿದರು. ಅಹಂ ಬಿಟ್ಟು, ಸಮನ್ವಯದೊಂದಿಗೆ ಕೆಲಸ ಮಾಡುವಂತೆ ತಾಕೀತು ಮಾಡಿದರು.

ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ, ಜಿಲ್ಲೆಯ ಅಭಿವೃದ್ಧಿ ಕಾರ್ಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜವಾಬ್ದಾರಿ. ಈ ಮೂವರೂ ಅಧಿಕಾರಿಗಳು ಯಾವುದೇ ಅಹಂ ಬಿಟ್ಟು, ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಕಾರ್ಯದರ್ಶಿಗಳ ಜೊತೆಗೆ ಸಮನ್ವಯದೊಂದಿಗೆ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂ-ಯಾದವ್ RJD ತುಷ್ಠಿಕರಣಕ್ಕೆ ಬುದ್ಧಿ ಕಲಿಸಿದ್ದು ನಮ್ಮ ಮಹಿಳೆ-ಯುವಕರ M-Y ಸೂತ್ರ: ಪ್ರಧಾನಿ ಮೋದಿ

ಬಿಹಾರ ಚುನಾವಣೆಯಲ್ಲಿ ಅನ್ಯಾಯ; ಫಲಿತಾಂಶಗಳು ಆಘಾತಕಾರಿ: ಹೀನಾಯ ಸೋಲಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ!

ಬಿಹಾರ ಸಿಎಂ ಗಾದಿಯಲ್ಲಿ ಮುಂದುವರೆಯುತ್ತಾರಾ ನಿತೀಶ್ ಕುಮಾರ್?: ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ ಹೇಳಿದ್ದೇನು?

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು

11 ಬೌಂಡರಿ, 15 ಸಿಕ್ಸರ್... 32 ಎಸೆತಗಳಲ್ಲಿ ಶತಕ: ರಿಷಬ್ ಪಂತ್ ದಾಖಲೆಗೇ ಕುತ್ತು ತಂದಿದ್ದ Vaibhav Suryavanshi!

SCROLL FOR NEXT