ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು ಕೊರೋನಾಗೆ ಮತ್ತೊಬ್ಬರು ಬಲಿ; 17 ಮಂದಿಗೆ ಪಾಸಿಟಿವ್, ಇಬ್ಬರು ಡಿಸ್ಚಾರ್ಜ್, 1 ಸಾವು

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 17 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣ ಮುಂದುವರೆದಿರುವಂತೆಯೇ ಇಂದು 17 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 17 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅಂತೆಯೇ ಇದೇ ಅವಧಿಯಲ್ಲಿ ಸೋಂಕಿಗೆ ತುತ್ತಾಗಿದ್ದ ಇಬ್ಬರು ಗುಣಮುಖರಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಸಕ್ರಿಯ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.

ಈ ಪೈಕಿ 225 ಮಂದಿ ಹೋಮ್ ಐಸೋಲಷನ್ (ಮನೆಯಲ್ಲೇ ಚಿಕಿತ್ಸೆ) ನಲ್ಲಿದ್ದಾರೆ. 3 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಬ್ಬರು ಕೃತಕ ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಕೃತಕ ಆಮ್ಲಜನಕದ ಬೆಂಬಲದಲ್ಲಿದ್ದ ಓರ್ವ ಸೋಂಕಿತರು ಇಂದು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು 276 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 267 RTPCR ಪರೀಕ್ಷೆ ಮಾಡಲಾಗಿದೆ. 19 RAT ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ಅನುದಾನ: ಕಾವೇರಿ ಆರತಿ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ; ಡಿ.ಕೆ. ಶಿವಕುಮಾರ್

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

SCROLL FOR NEXT