ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು 87 ಮಂದಿಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 87 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 504 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 87 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 311 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 297 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 14 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ