ಡಿ.ಕೆ. ಶಿವಕುಮಾರ್ 
ರಾಜ್ಯ

ಬೆಂಗಳೂರು ಶಾಲಾ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ಹೊಸ ಯೋಜನೆ: ಡಿ.ಕೆ ಶಿವಕುಮಾರ್

ಬೆಂಗಳೂರು ವ್ಯಾಪ್ತಿಯಲ್ಲಿ 6,000 ಶಾಲೆಗಳಿವೆ. ಇದರಲ್ಲಿ 4,500 ಖಾಸಗಿ ಹಾಗೂ 1,500 ಸರ್ಕಾರಿ ಶಾಲೆಗಳಿವೆ. ಈ ಎಲ್ಲ ಶಾಲೆಗಳಿಗೂ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಪರಿಸರ ಜಾಗೃತಿಗೆ ನಾಂದಿ ಹಾಡುವಂತೆ, ಮಕ್ಕಳಲ್ಲಿ ಹಸಿರು ಇಂಧನ ನೀರಿನ ಸಂರಕ್ಷಣೆ ಸ್ವಚ್ಛತೆ ಮತ್ತು ವಾಯು ಗುಣಮಟ್ಟದ ಬಗ್ಗೆ ಅರಿವು ಮೂಡಿಸಲು ‘ಹವಾಮಾನ ಕಾರ್ಯಯೋಜನೆ ಕ್ಲಬ್‌’ಗಳನ್ನು ರಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಾಗಿದ್ದಾರೆ.

ಸೋಮವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, "ವಿಶ್ವ ಪರಿಸರ ದಿನಾಚರಣೆಗೆ ಮುಂಚಿತವಾಗಿ, ಬೆಂಗಳೂರನ್ನು ಹಸಿರು ಮತ್ತು ಸ್ವಚ್ಛವಾಗಿಡಲು, ಕ್ಲಬ್‌ಗಳನ್ನು ಸ್ಥಾಪಿಸಲಾಗುವುದು. ಪ್ರತಿ ಕ್ಲಬ್‌ಗೆ ಒಬ್ಬ ಶಿಕ್ಷಕರು ಮತ್ತು ಕನಿಷ್ಠ 25 ವಿದ್ಯಾರ್ಥಿಗಳು ಇರುತ್ತಾರೆ" ಎಂದು ಹೇಳಿದರು.

ಈ ಯೋಜನೆಯ ಭಾಗವಾಗಿ, ಜೂನ್ 6ರಂದು ನೆಹರೂ ತಾರಾಲಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಲ್ಲಿ ವಸ್ತು ಪ್ರದರ್ಶನದಿಂದ ಹಿಡಿದು ರಸಪ್ರಶ್ನೆ, ಚರ್ಚಾ ಸ್ಪರ್ಧೆಗಳ ಮೂಲಕ ಮಕ್ಕಳಲ್ಲಿ ಪರಿಸರ ಕುರಿತ ಜ್ಞಾನ ಬೆಳೆಸಲಾಗುತ್ತದೆ. ಇದಕ್ಕೆ ಈಗಾಗಲೇ ನೂರಾರು ಶಾಲೆಗಳು ನೋಂದಾಯಿಸಿಕೊಂಡಿವೆ.

ಬೆಂಗಳೂರು ವ್ಯಾಪ್ತಿಯಲ್ಲಿ 6,000 ಶಾಲೆಗಳಿವೆ. ಇದರಲ್ಲಿ 4,500 ಖಾಸಗಿ ಹಾಗೂ 1,500 ಸರ್ಕಾರಿ ಶಾಲೆಗಳಿವೆ. ಈ ಎಲ್ಲ ಶಾಲೆಗಳಿಗೂ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. 650 ಶಾಲೆಗಳು ಈಗಾಗಲೇ ಸಹಮತ ಸೂಚಿಸಿದ್ದು, 18 ಕ್ಲಬ್‌ಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಕ್ಲಬ್ ಸದಸ್ಯರಿಗೆ ಅಗತ್ಯವಾದ ಬ್ಯಾಡ್ಜ್‌ಗಳು ಮತ್ತು ಪ್ರಮಾಣಪತ್ರಗಳನ್ನು ಸರ್ಕಾರವು ಒದಗಿಸುತ್ತದೆ. ಹವಾಮಾನ ಕ್ರಿಯಾ ಯೋಜನೆಯಲ್ಲಿ ಮುಂಬೈ, ಚೆನ್ನೈ ಮತ್ತು ಬೆಂಗಳೂರು ನಗರಗಳು ಬಾಗಿಯಾಗಿವೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 6,000 ಶಾಲೆಗಳಿವೆ, ಅವುಗಳಲ್ಲಿ 4,500 ಖಾಸಗಿ ಮತ್ತು 1,500 ಸರ್ಕಾರಿ ಶಾಲೆಗಳು. ಈ ಎಲ್ಲಾ ಶಾಲೆಗಳನ್ನು ಈ ಯೋಜನೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ ಎಂದರು.

ಈ ಯೋಜನೆಗೆ ಈಗಾಗಲೇ 650 ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ಒಪ್ಪಿಗೆ ನೀಡಿವೆ ಮತ್ತು 18 ಕ್ಲಬ್‌ಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಸಾರ್ವಜನಿಕ ಸಂಸ್ಥೆಗಳಿಗೂ ಅಂತಹ ಕ್ಲಬ್‌ಗಳನ್ನು ರಚಿಸಲು ಅವಕಾಶ ನೀಡಲಾಗುವುದು ಮತ್ತು ಜೂನ್ 6 ರಂದು ಹೆಚ್ಚಿನ ವಿವರಗಳು ಮತ್ತು ನೋಂದಣಿಗಳನ್ನು ಸ್ವೀಕರಿಸಲು ವೆಬ್‌ಸೈಟ್ ಅನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ನೀರು, ತ್ಯಾಜ್ಯ ನಿರ್ವಹಣೆ, ನಗರ ಯೋಜನೆ, ಜೀವವೈವಿಧ್ಯ, ವಾಯು ಗುಣಮಟ್ಟ, ವಿಪತ್ತು ನಿರ್ವಹಣೆ ಮತ್ತು ಇಂಧನ - ಹವಾಮಾನ ವಲಯಗಳಲ್ಲಿ 'ಬ್ಲೂ-ಗ್ರೀನ್ ಪ್ರಶಸ್ತಿ'ಗೆ ಅರ್ಜಿ ಸ್ವೀಕರಿಸಲಾಗಿದೆ ಮತ್ತು ಈ ಪ್ರಶಸ್ತಿಗೆ 175 ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT